ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಶಾಸಕಾಂಗ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಯಿತು.
ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡುವ ಪ್ರಸ್ತಾವವನ್ನು ಸಭೆಯಲ್ಲಿ ಡಿಕೆ ಶಿವಕುಮಾರ ಮಂಡಿಸಿದರು. ಇದಕ್ಕೆ ಡಾ. ಜಿ ಪರಮೇಶ್ವರ, ಎಚ್ ಕೆ‌ ಪಾಟೀಲ್, ಆರ್ ವಿ ದೇಶಪಾಂಡೆ, ಎಂಬಿ ಪಾಟೀಲ,‌ ಲಕ್ಷ್ಮೀ‌ ಹೆಬ್ಬಾಳ್ಕರ, ತನ್ವೀರ್ ಸೇಠ್,‌ ಕೆ.ಎಚ್. ಮುನಿಯಪ್ಪ ಅನುಮೋದಿಸಿದರು.
ಈಗಾಗಲೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ ಅವರ ಹೆಸರನ್ನು ದೆಹಲಿಯಲ್ಲಿ ಘೋಷಣೆ ಇಂದು ಬೆಳಿಗ್ಗೆಯೇ ಘೋಷಣೆ ಮಾಡಲಾಗಿತ್ತು. ಸಂಜೆ ಬೆಂಗಳೂರಿನಲ್ಲಿ ಅಧಿಕೃತವಾಗಿ ಹಾಗೂ ಔಪಚಾರಿಕವಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದರು.
ನಂತರ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ಅವರು ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಲು ರಾಜಭವನಕ್ಕೆ ತೆರಳಿದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವನಚ ಸ್ವೀಕಾರ ಮಾಡಲಿದ್ದಾರೆ. ಶುಕ್ರವಾರ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಸಚಿವರ ಪಟ್ಟಿಯನ್ನು ತೆಗೆದುಕೊಂಡು ಹೋಗಲಿದ್ದು, ನಾಳೆ ಸಂಜೆಯೊಳಗೆ ನೂತನ ಸಚಿವರ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಕೊನೆಗೂ 44 ನಿಗಮ/ಮಂಡಳಿಗಳಿಗೆ ಅಧ್ಯಕ್ಷರ ನೇಮಕ : ಯಾರಿಗೆ ಯಾವ ನಿಗಮ ಮಂಡಳಿ; ಪಟ್ಟಿ ಇಲ್ಲಿದೆ..

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement