ಜಲ್ಲಿಕಟ್ಟು, ಕಂಬಳ ಕ್ರೀಡೆಗಳಿಗೆ ಸುಪ್ರೀಂ ಕೋರ್ಟ್‌ ಅನುಮತಿ; ತಿದ್ದುಪಡಿ ಕಾಯಿದೆ ಎತ್ತಿ ಹಿಡಿದ ನ್ಯಾಯಾಲಯ

ನವದೆಹಲಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆಗೆ (ಪಿಸಿಎ) ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಗಳ ಸಿಂಧುತ್ವವನ್ನು ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠ ಗುರುವಾರ ಎತ್ತಿಹಿಡಿದಿದೆ. ಆ ಮೂಲಕ ರಾಜ್ಯದ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡಿದೆ.
ಇದೇ ವೇಳೆ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳನ್ನು ಕೂಡ ನ್ಯಾಯಾಲಯ ಎತ್ತಿಹಿಡಿದಿದೆ ಎದು ಬಾರ್‌  & ಬೆಂಚ್‌ ವರದಿ ಮಾಡಿದೆ.
ಗೂಳಿಗಳ ನೋವು ಸಂಕಟ ಶಮನಗೊಳಿಸಿ ಕ್ರೀಡೆಯನ್ನು ಮುಂದುವರಿಸಲು ಅನುವು ಮಾಡಿಕೊಡುವಂತಹ ತಿದ್ದುಪಡಿಗಳನ್ನು ಜಾರಿಗೆ ತಂದಿದ್ದು, ಸರ್ಕಾರದ ಕ್ರಮದಲ್ಲಿ ಲೋಪ ಇಲ್ಲ ಎಂದು ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್, ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿ.ಟಿ. ರವಿಕುಮಾರ ಅವರಿದ್ದ ಸಾಂವಿಧಾನಿಕ ಪೀಠ ಹೇಳಿದೆ.
ಇದು ಗೋಜಾತಿಯ ಜಾನುವಾರುಗಳಿಗೆ ಸಂಬಂಧಿಸಿದ ಕ್ರೀಡೆಯಾಗಿದ್ದು ಇದರಲ್ಲಿ ಪಾಲ್ಗೊಳ್ಳುವುದಕ್ಕೆ ಅನುಮತಿ ನೀಡಲಾಗುವುದು. ಸಂವಿಧಾನದ 48 ನೇ ವಿಧಿಗೆ ಕಾಯಿದೆ ಸಂಬಂಧಿಸಿದ್ದಲ್ಲ. ಅದು ಭಾರತದ ಸಂವಿಧಾನದ ಏಳನೇ ಶೆಡ್ಯೂನ ನಮೂದು 17, ಪಟ್ಟಿ IIIಗೆ ಸೇರಿದ್ದೆಂದು ಹೇಳಬಹುದಾಗಿದೆ” ಎಂದು ತೀರ್ಪು ವಿವರಿಸಿದೆ.
ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳನ್ನು ಕೂಡ ನ್ಯಾಯಾಲಯ ಇದೇ ವೇಳೆ ಎತ್ತಿಹಿಡಿದಿದೆ. ಈ ಕಾನೂನುಗಳು ಸಂವಿಧಾನದ 51A(ಜಿ) ಮತ್ತು 51 ಎ(ಎಚ್‌) ವಿಧಿಗಳನ್ನು ಉಲ್ಲಂಘಿಸುವುದಿಲ್ಲ ಹೀಗಾಗಿ ಅವು 14 ಮತ್ತು 21 ನೇ ವಿಧಿಗಳನ್ನೂ ಉಲ್ಲಂಘಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಜೂನ್ 23 ರಂದು ನಿತೀಶ್ ಕುಮಾರ್ ಕರೆದ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುವೆ: ಶರದ್ ಪವಾರ್

ಈ ತಿದ್ದುಪಡಿ ಕಾಯಿದೆಗಳು ಮಾನ್ಯತೆ ಪಡೆದ ಶಾಸನಗಳಾಗಿದ್ದು ಈ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ತಿದ್ದುಪಡಿ ಮಾಡಿದ ಕಾನೂನಿನ ಕಟ್ಟುನಿಟ್ಟಾದ ಅನುಷ್ಠಾನಕ್ಕೆ ಸಂಬಂಧಪಟ್ಟ ಇಲಾಖೆ ಮತ್ತು ಅಧಿಕಾರಿಗಳು ಜವಾಬ್ದಾರರಾಗಿರುತ್ತಾರೆ” ಎಂದು ನ್ಯಾಯಾಲಯ ಹೇಳಿದೆ.
ತಮಿಳುನಾಡಿನಲ್ಲಿ ಜನಪ್ರಿಯವಾಗಿರುವ ಜಲ್ಲಿಕಟ್ಟು ಪ್ರಾಣಿಗಳ ಹಕ್ಕುಗಳು ಹಾಗೂ ಕ್ರೌರ್ಯ ತಡೆ (ಪಿಸಿಎ) ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು 2014ರ ಮೇನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.
ಜನವರಿ 2016ರಲ್ಲಿ, ಕೇಂದ್ರ ಸರ್ಕಾರ ಪಿಸಿಎ ಕಾಯಿದೆಯ ವ್ಯಾಪ್ತಿಯಿಂದ ಜಲ್ಲಿಕಟ್ಟು ಮತ್ತು ಎತ್ತಿನ ಬಂಡಿ ಓಟಗಳಿಗೆ ವಿನಾಯಿತಿ ನೀಡುವ ಹೊಸ ಅಧಿಸೂಚನೆ ಹೊರಡಿಸಿತ್ತು. ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ನಂತರ, ತಮಿಳುನಾಡು ಸರ್ಕಾರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ (ತಮಿಳುನಾಡು ತಿದ್ದುಪಡಿ) ಕಾಯಿದೆ- 2017ನ್ನು ಜಾರಿಗೊಳಿಸಿತು. ಇದರಿಂದಾಗಿ ಜಲ್ಲಿಕಟ್ಟು ರೀತಿಯ ಗೂಳಿ ಪಳಗಿಸುವ ಕ್ರೀಡೆಗೆ ಹಸಿರು ನಿಶಾನೆ ದೊರೆತಿತ್ತು. ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.
ಅರ್ಜಿದಾರರ ಪರ ವಕೀಲರು ಜಲ್ಲಿಕಟ್ಟು ಒಂದು ಹಿಂಸಾತ್ಮಕ ಕ್ರೀಡೆಯಾಗಿದ್ದು ತಮ್ಮ ಒಪ್ಪಿಗೆ ನೀಡಲಾಗದ ಮೂಕ ಪ್ರಾಣಿಗಳು ಇದರಲ್ಲಿ ಭಾಗವಹಿಸಬೇಕಾಗುತ್ತದೆ ಎಂದು ದೂರಿದ್ದರು. ಅರ್ಜಿದಾರರ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ, ಶ್ಯಾಮ್ ದಿವಾನ್, ಆನಂದ್ ಗ್ರೋವರ್, ಕೃಷ್ಣನ್ ವೇಣುಗೋಪಾಲ್ ಮತ್ತು ವಿ ಗಿರಿ ವಾದ ಮಂಡಿಸಿದರು.

ಇಂದಿನ ಪ್ರಮುಖ ಸುದ್ದಿ :-   ಪ್ರಧಾನಿ ಮೋದಿ ಭೇಟಿ ಮಾಡಿದ ಚಾಟ್‌ಜಿಪಿಟಿ ಸೃಷ್ಟಿಕರ್ತ ಸ್ಯಾಮ್ ಆಲ್ಟ್‌ಮನ್ : ಭಾರತದಲ್ಲಿ ಕೃತಕಬುದ್ಧಿಮತ್ತೆ (AI) ಬಳಕೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement