ದಲಿತರನ್ನು ಉಪಮುಖ್ಯಮಂತ್ರಿ ಮಾಡದಿದ್ದರೆ…: ಕಾಂಗ್ರೆಸ್ ನಾಯಕ ಡಾ. ಪರಮೇಶ್ವರ ಹೇಳಿದ್ದೇನು..?

ಬೆಂಗಳೂರು: ದಲಿತರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡದಿದ್ದಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಿ ಪಕ್ಷಕ್ಕೆ ತೊಂದರೆಯಾಗಲಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಜಿ ಪರಮೇಶ್ವರ ಅವರು ಹೇಳಿದ್ದಾರೆ.
ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಾ. ಪರಮೇಶ್ವರ ಅವರು ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾಗಿ (ಎಂಟು ವರ್ಷಗಳು) ಸುದೀರ್ಘ ಸೇವೆ ಸಲ್ಲಿಸಿದ್ದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಅವರ ಏಕೈಕ ಉಪಮುಖ್ಯಮಂತ್ರಿ ಎಂದು ಕಾಂಗ್ರೆಸ್ ಘೋಷಿಸಿದ ಕೆಲವೇ ಗಂಟೆಗಳ ನಂತರ ಅವರ ಪ್ರತಿಕ್ರಿಯೆ ಬಂದಿದೆ.
ಶಿವಕುಮಾರ ಅವರೊಬ್ಬರೇ ಉಪಮುಖ್ಯಮಂತ್ರಿ ಆಗಬೇಕು ಎಂದು ನಾಯಕತ್ವಕ್ಕೆ ಷರತ್ತು ಹಾಕಿರುವ ಕುರಿತು ಕೇಳಿದ ಪ್ರಶ್ನೆಗೆ, ಪರಮೇಶ್ವರ ಅವರು, ಶಿವಕುಮಾರ ಅವರ ದೃಷ್ಟಿಯಲ್ಲಿ ಅವರು ಹೇಳಿದ್ದು ಸರಿಯಾಗಬಹುದು, ಆದರೆ ಹೈಕಮಾಂಡ್ ದೃಷ್ಟಿಕೋನ ಬೇರೆಯಾಗಿರಬೇಕು. ನಾವು ಅವರಿಂದ (ಹೈಕಮಾಂಡ್) ನಿರೀಕ್ಷಿಸುತ್ತೇವೆ…” ಎಂದು ಹೇಳಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಕಾಂಗ್ರೆಸ್‌ ಸರ್ಕಾರದ ಬಗ್ಗೆ ಜನರಲ್ಲಿ ಅದರಲ್ಲೂ ದಲಿತ ಸಮುದಾಯದಲ್ಲಿ ಅಪಾರ ನಿರೀಕ್ಷೆ ಇದೆ. ಈ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ನಮ್ಮ ನಾಯಕತ್ವವು ನಿರ್ಧಾರ ತೆಗೆದುಕೊಳ್ಳಬೇಕು. ಅದು ಆಗದಿದ್ದರೆ ಸಹಜವಾಗಿಯೇ ಅದಕ್ಕೆ ಪ್ರತಿಕ್ರಿಯೆಗಳು ಬರುತ್ತವೆ. ಅದನ್ನು ನಾನು ಹೇಳುವ ಅಗತ್ಯವಿಲ್ಲ. ನಂತರ ಅದನ್ನು ಅರಿತುಕೊಳ್ಳುವ ಬದಲು ಈಗಲೇ ಅದನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಪಕ್ಷಕ್ಕೆ ತೊಂದರೆಯಾಗಬಹುದು, ಅದನ್ನು ಅರ್ಥ ಮಾಡಿಕೊಳ್ಳಬೇಕು ಹೇಳಬಯಸುತ್ತೇನೆ ಎಂದು ಪರಮೇಶ್ವರ ಹೇಳಿದರು.
ನಾನು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೆ. ಆದರೆ ಈಗ ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಬೇಕು, ಆದ್ದರಿಂದ ಮುಂದಿನ ದಿನಗಳಲ್ಲಿ ಅವರು ಏನು ಮಾಡುತ್ತಾರೆ ಎಂಬುದನ್ನು ನೋಡೋಣ, ಸದ್ಯಕ್ಕೆ ಇಬ್ಬರ ಬಗ್ಗೆ ಘೋಷಣೆ ಮಾಡಿದ್ದಾರೆ,. ಸಚಿವ ಸಂಪುಟ ವಿಸ್ತರಣೆ ವೇಳೆ ಯಾವ ರೀತಿ ನ್ಯಾಯ ಕೊಡಿಸುತ್ತಾರೋ ಕಾದು ನೋಡಬೇಕಿದೆ ಎಂದರು.

ಇಂದಿನ ಪ್ರಮುಖ ಸುದ್ದಿ :-   ಜೂನ್ 23 ರಂದು ನಿತೀಶ್ ಕುಮಾರ್ ಕರೆದ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುವೆ: ಶರದ್ ಪವಾರ್

”ಹೈಕಮಾಂಡ್ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಯಾರೆಂದು ಘೋಷಣೆ ಮಾಡಿದೆ. ಸಿದ್ದರಾಮಯ್ಯ ಅವರು ನಮ್ಮ ಪಕ್ಷದಿಂದ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗುತ್ತಿದ್ದಾರೆ, ಅವರು ಉತ್ತಮ ಆಡಳಿತ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವೆ, ಭರವಸೆ ನೀಡಿರುವುದರಿಂದ ಜನರ ನಿರೀಕ್ಷೆಗಳು ನಮ್ಮ ಮೇಲೆ ಭಾರಿ ಪ್ರಮಾಣದಲ್ಲಿವೆ. ನಮ್ಮ ಪ್ರಣಾಳಿಕೆಯಲ್ಲಿ ಉತ್ತಮ ಆಡಳಿತವಿದೆ. ನಾನು ನಿರ್ಧಾರವನ್ನು ಸ್ವಾಗತಿಸುತ್ತೇನೆ ಮತ್ತು ಉತ್ತಮ ಆಡಳಿತ ನೀಡುವಲ್ಲಿ ಅವರು ನಮ್ಮೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ ಎಂದು ನಿರೀಕ್ಷಿಸುತ್ತೇನೆ ಎಂದು ಹೇಳಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆಯನ್ನು ಪ್ರತಿನಿಧಿಸುವ ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ 2013ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಆಗ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರು, ಆದರೆ ಅವರು ಸೋತಿದ್ದರಿಂದ ಸಿದ್ದರಾಮಯ್ಯ ಸರ್ಕಾರದಲ್ಲಿ (2013-2018) ಎಂಎಲ್‌ಸಿ ಮತ್ತು ಸಚಿವರಾದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement