ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಸೂತ್ರದಂತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿಕೆ ಶಿವಕುಮಾರ ಅವರನ್ನು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿ ಯಾರೆಂಬ ರಾಜಕೀಯ ಬಿಕ್ಕಟ್ಟು ಅಂತ್ಯಗೊಳಿಸಲು ಬುಧವಾರ ತಡರಾತ್ರಿಯವರೆಗೆ ಶ್ರಮಿಸಿದರು ಮತ್ತು ಸರ್ಕಾರ ರಚನೆಗೆ ಒಮ್ಮತ ಮೂಡಿಸಿದರು ಎಂದು ಮೂಲಗಳು ಹೇಳಿವೆ. ಮೇ 20 ರಂದು ಬೆಂಗಳೂರಿನಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಈ ಸಮಾರಂಭ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಕಾಂಗ್ರೆಸ್ ಹೈಕಮಾಂಡ್ ನೀಡಿರುವ ಹೊಸ ರಾಜಿ ಸೂತ್ರಕ್ಕೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ ಒಪ್ಪಿದ್ದಾರೆ ಎಂದು ಹೇಳಲಾಗಿದೆ. ಮೊದಲ ಎರಡು ವರ್ಷ ಸಿದ್ದರಾಮಯ್ಯ, ಆನಂತರ ಮೂರು ವರ್ಷ ಡಿಕೆ ಶಿವಕುಮಾರ ಮುಖ್ಯಮಂತ್ರಿ ಆಗುವಂತೆ ಕಾಂಗ್ರೆಸ್ ಹೈಕಮಾಂಡ್ ನೀಡಿರುವ ರಾತ್ರಿ ಸೂತ್ರಕ್ಕೆ ಇಬ್ಬರೂ ನಾಯಕರು ಒಪ್ಪಿದ್ದಾರೆ ಎನ್ನಲಾಗಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಬುಧವಾರ ರಾತ್ರಿ 11.30ರ ನಂತರ ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ, ಕಾಂಗ್ರೆಸ್ ನಾಯಕಿಯರಾದ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರು ಮಧ್ಯಪ್ರವೇಶ ಮಾಡಿದ ನಂತರ ರಾಜಿ ಸೂತ್ರಕ್ಕೆ ಶಿವಕುಮಾರ ಒಪ್ಪಿದ್ದಾರೆ ಎನ್ನಲಾಗಿದೆ.
ಇಂದು ಗುರುವಾರ ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಕರೆಯಲಾಗಿದ್ದು, ಅಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಸಿಎಲ್‌ಪಿ ಸಭೆ ನಡೆಸಲು ಎಐಸಿಸಿ ಕೇಂದ್ರ ವೀಕ್ಷಕರಿಗೆ ಬೆಂಗಳೂರಿಗೆ ತಲುಪುವಂತೆ ತಿಳಿಸಲಾಗಿದೆ.
ಬುಧವಾರದಂದು, ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಇಂದು ಅಥವಾ ನಾಳೆ ನಿರ್ಧಾರವನ್ನು ಪ್ರಕಟಿಸಲಾಗುವುದು ಮತ್ತು 72 ಗಂಟೆಗಳ ಒಳಗೆ ಹೊಸ ಕ್ಯಾಬಿನೆಟ್ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ