ಡಿ.ಕೆ ಶಿವಕುಮಾರಗೆ ಸುಪ್ರೀಂ ಕೋರ್ಟಿನಿಂದ ತಾತ್ಕಾಲಿಕ ರಿಲೀಫ್

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ ಅವರಿಗೆ ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ.
ಡಿ.ಕೆ ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ ತೆರವಿಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಡಿ.ಕೆ ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಿಚಾರಣೆ ನಡೆಸಿತು. ಆದರೆ ಮಧ್ಯಂತರ ಆದೇಶ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ಸಿಬಿಐಗೆ ಪೀಠ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ ತಿಂಗಳಿಗೆ ಮುಂದೂಡಿದೆ. ಇದರಿಂದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರಿಗೆ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಂತಾಗಿದೆ.
ಶಿವಕುಮಾರ ವಿರುದ್ಧದ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಹೈಕೋರ್ಟ್ ರಜೆ ಅವಧಿ ಮುಗಿಯಲಿರುವುದರಿಂದ ಅಲ್ಲೇ ವಿಚಾರಣೆ ಸೂಕ್ತ ಎಂದು ಅಭಿಪ್ರಾಯಪಟ್ಟಿದೆ.
ಶಿವಕುಮಾರ ಮತ್ತು ಅವರ ಕುಟುಂಬದ ಸದಸ್ಯರು 74.93 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬ ಆರೋಪ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು.

ಪ್ರಮುಖ ಸುದ್ದಿ :-   ಡಿ.ಕೆ. ಶಿವಕುಮಾರ ವಿರುದ್ಧ ಎಫ್ ಐಆರ್ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement