ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನಕ್ಕೆ ನಿಷೇಧ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನವನ್ನು ನಿಷೇಧಿಸಿ ಪಶ್ಚಿಮ ಬಂಗಾಳ ಸರ್ಕಾರ ಮೇ 8 ರಂದು ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ಗುರುವಾರ ತಡೆ ನೀಡಿದೆ.
ಪಶ್ಚಿಮ ಬಂಗಾಳ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪಶ್ಚಿಮ ಬಂಗಾಳ ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಪ್ರದರ್ಶನವನ್ನು ಬ್ಯಾನ್​ ಮಾಡಿ ಅಲ್ಲಿನ ಸರ್ಕಾರ ಮೇ 8ರಂದು ಆದೇಶ ಹೊರಡಿಸಿತ್ತು. ಈ ನಿಷೇಧವನ್ನು ತೆಗೆದುಹಾಕುವಂತೆ ಕೋರಿ ‘ದಿ ಕೇರಳ ಸ್ಟೋರಿ’ ತಯಾರಕರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಅವರು ಸುಪ್ರೀಂ ಕೋರ್ಟ್‌ ಈ ಆದೇಶ ನೀಡಿದೆ.
ಚಿತ್ರ ನಿರ್ಮಾಪಕರು ತಮಿಳುನಾಡಿನ ಪರಿಸ್ಥಿತಿಯನ್ನು ಎತ್ತಿ ತೋರಿಸಿದರು, ಅಲ್ಲಿ ರಾಜ್ಯ ಸರ್ಕಾರವು ಚಿತ್ರಮಂದಿರಗಳು ತಮ್ಮ ಸ್ವಂತ ಇಚ್ಛೆಯ ಮೇರೆಗೆ ಚಲನಚಿತ್ರದ ಪ್ರದರ್ಶನವನ್ನು ನಿಲ್ಲಿಸಿವೆ ಎಂದು ಹೇಳಿಕೊಂಡಿದೆ. ಈ ಕುರಿತು ಸುಪ್ರೀಂ ಕೋರ್ಟ್, ಚಿತ್ರ ಪ್ರದರ್ಶನವನ್ನು ನಿರ್ಬಂಧಿಸಲು ಮತ್ತು ಎಲ್ಲಾ ಚಲನಚಿತ್ರ ಪ್ರೇಕ್ಷಕರಿಗೆ ರಕ್ಷಣೆ ನೀಡಲು ಕ್ರಮಗಳನ್ನು ತೆಗೆದುಕೊಳ್ಳದಂತೆ ರಾಜ್ಯಕ್ಕೆ ನಿರ್ದೇಶನ ನೀಡಿದೆ.
ತಮಿಳುನಾಡಿಗೂ ಸೂಚನೆ ನೀಡಿರುವ ನ್ಯಾಯಾಲಯ, ಯಾವುದೇ ಕಾರಣಕ್ಕೆ ತಮಿಳುನಾಡಿನಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಪ್ರದರ್ಶನಕ್ಕೆ ಅಡ್ಡಿಪಡಿಸಬಾರದು ಮತ್ತು ಸಿನಿಮಾ ಬಿಡುಗಡೆಗೆ ಅಗತ್ಯವಾದ ಭದ್ರತೆ ಒದಗಿಸುವಂತೆ ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ: ಈ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗೇ ಮತ ಹಾಕಬೇಡಿ ಎಂದು ಮತದಾರರಿಗೆ ಮನವಿ ಮಾಡುತ್ತಿರುವ ಕಾಂಗ್ರೆಸ್‌...!

ಚಿತ್ರತಂಡಕ್ಕೆ ಸೂಚನೆ ಒಂದನ್ನು ನೀಡಿರುವ ಸುಪ್ರೀಂಕೋರ್ಟ್​, ಈ ಕತೆ ಕಾಲ್ಪನಿಕ ಮತ್ತು 32 ಸಾವಿರ ಯುವತಿಯರು ಕೇರಳದಿಂದ ಕಾಣೆಯಾಗಿದ್ದಾರೆ ಎಂಬುದಕ್ಕೆ ಯಾವುದೇ ಆಧಾರವಿಲ್ಲ ಎಂಬ ಹಕ್ಕು ನಿರಾಕರಣೆ (ಡಿಸ್ಕ್ಲೇಮರ್​) ಅಳವಡಿಸುವಂತೆ ಸೂಚನೆ ನೀಡಿದೆ.
ಇದಕ್ಕೂ ಮುನ್ನ ಮೇ 12ರಂದು ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ನಿಷೇಧಿಸುವ ನಿರ್ಧಾರದ ಬಗ್ಗೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. “ದಿ ಕೇರಳ ಸ್ಟೋರಿಯನ್ನು ಬಂಗಾಳದಲ್ಲಿ ಏಕೆ ಬಿಡುಗಡೆ ಮಾಡಬಾರದು? ಚಿತ್ರವು ದೇಶದ ಉಳಿದ ಭಾಗಗಳಲ್ಲಿ ಓಡುತ್ತಿದೆ. ಪಶ್ಚಿಮ ಬಂಗಾಳ ಬೇರೆ ರಾಜ್ಯಗಳಿಗಿಂತ ಭಿನ್ನವೇನಲ್ಲ ಎಂದು ಕಿಡಿಕಾರಿತ್ತು.

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement