ಮುಂಬೈ 26/11 ದಾಳಿ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಕೋರ್ಟ್ ಅನುಮತಿ

ವಾಷಿಂಗ್ಟನ್: 2008ರ ಮುಂಬೈ ಭಯೋತ್ಪಾದನಾ ದಾಳಿಯಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಪಾಕಿಸ್ತಾನಿ ಮೂಲದ ಕೆನಡಾದ ಉದ್ಯಮಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಅಮೆರಿಕದ ಕ್ಯಾಲಿಫೋರ್ನಿಯಾ ನ್ಯಾಯಾಲಯ ತೀರ್ಪು ನೀಡಿದೆ.
ಮೇ 16ರಂದು ಲಾಸ್ ಏಂಜಲೀಸ್‌ನ ಸೆಂಟ್ರಲ್ ಡಿಸ್ಟ್ರಿಕ್ಟ್‌ನಲ್ಲಿರುವ ಅಮೆರಿಕದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಜಾಕ್ವೆಲಿನ್ ಚೂಲ್‌ಜಿಯನ್ ಅವರು 62 ವರ್ಷದ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬಹುದೆಂದು ನ್ಯಾಯಾಲಯವು ತೀರ್ಮಾನಿಸಿದೆ ಎಂದು ಹೇಳಿದರು.
2008ರಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ನಡೆಸಿದ 26/11 ದಾಳಿಯಲ್ಲಿ ಆತನ ಪಾತ್ರದ ಕುರಿತು ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿದೆ. ಈ ದಾಳಿಗಳಲ್ಲಿ ಆತನ ಪಾತ್ರಕ್ಕಾಗಿ ಭಾರತದಿಂದ ಹಸ್ತಾಂತರ ಕೋರಿಕೆಯ ಮೇರೆಗೆ ಅವರನ್ನು ಅಮೆರಿಕದಲ್ಲಿ ಬಂಧಿಸಲಾಗಿತ್ತು. ರಾಜತಾಂತ್ರಿಕ ಮಾರ್ಗಗಳ ಮೂಲಕ ಆತನನ್ನು ಭಾರತಕ್ಕೆ ಕರೆತರಲು ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಸಿದ್ಧ ಎಂದು ಎನ್ಐಎ ಹೇಳಿದೆ.

ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ, ಫೆಡರಲ್ ಪ್ರಾಸಿಕ್ಯೂಟರ್‌ಗಳು ರಾಣಾಗೆ ತನ್ನ ಬಾಲ್ಯದ ಸ್ನೇಹಿತ ಪಾಕಿಸ್ತಾನಿ-ಅಮೆರಿಕನ್ ಡೇವಿಡ್ ಕೋಲ್ಮನ್ ಹೆಡ್ಲಿ ಲಷ್ಕರ್-ಎ-ತೊಯ್ಬಾದೊಂದಿಗೆ ಶಾಮೀಲಾಗಿದ್ದಾನೆ ಮತ್ತು ಹೆಡ್ಲಿಗೆ ಸಹಾಯ ಮಾಡುವ ಮೂಲಕ ಮತ್ತು ಅವನ ಚಟುವಟಿಕೆಗಳಿಗೆ ರಕ್ಷಣೆ ನೀಡುವ ಮೂಲಕ ಭಯೋತ್ಪಾದಕ ಸಂಘಟನೆಯನ್ನು ಹಾಗೂ ಅದರ ಸಹವರ್ತಿಗಳನ್ನು ಬೆಂಬಲಿಸುತ್ತಿದ್ದನೆಂದು ವಾದಿಸಿದರು. ಹೆಡ್ಲಿಯ ಸಭೆಗಳು, ಅಲ್ಲಿ ಏನು ಚರ್ಚಿಸಲಾಯಿತು ಮತ್ತು ದಾಳಿಯ ಯೋಜನೆಗಳ ಬಗ್ಗೆ ರಾಣಾಗೆ ತಿಳಿದಿತ್ತು. ರಾಣಾ ಪಿತೂರಿಯ ಭಾಗವಾಗಿದ್ದಾನೆ ಮತ್ತು ಭಯೋತ್ಪಾದಕ ಕೃತ್ಯವನ್ನು ನಿಯೋಜಿಸುವ ಪ್ರಮುಖ ಅಪರಾಧವನ್ನು ಅವನು ಎಸಗಿರುವ ಸಂಭವನೀಯ ಕಾರಣವಿದೆ ಎಂದು ಅಮೆರಿಕ ಸರ್ಕಾರ ಪ್ರತಿಪಾದಿಸಿತು. ಮತ್ತೊಂದೆಡೆ, ರಾಣಾ ಪರ ವಕೀಲರು ಹಸ್ತಾಂತರವನ್ನು ವಿರೋಧಿಸಿದರು.
2008 ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಆರು ಅಮೆರಿಕನ್ನರು ಸೇರಿದಂತೆ ಒಟ್ಟು 166 ಜನರು ಸಾವಿಗೀಡಾದರು, ಇದರಲ್ಲಿ 10 ಪಾಕಿಸ್ತಾನಿ ಭಯೋತ್ಪಾದಕರು 60 ಗಂಟೆಗಳಿಗೂ ಹೆಚ್ಚು ಕಾಲ ಮುಂಬೈನ ಪ್ರಮುಖ ಸ್ಥಳಗಳಲ್ಲಿ ದಾಳಿ ಮಾಡಿ ಜನರನ್ನು ಕೊಂದರು.

ಪ್ರಮುಖ ಸುದ್ದಿ :-   ಕುಖ್ಯಾತ ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement