ಮೇ 21, 22 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು (Bengaluru) ಹಾಗೂ ರಾಜ್ಯದ ಹಲವೆಡೆ ಮೇ 21 ಮತ್ತು 22 ರಂದು ಮಳೆ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಗಾಳಿಯೊಂದಿಗೆ ಮಳೆಯಾಗಲಿದೆ. ಮೇ 22 ರಂದು ಕರಾವಳಿ ಪ್ರದೇಶದಲ್ಲಿಯೂ ಗುಡುಗು ಮಿಂಚಿನಿಂದ ಕೂಡದ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ವಾರಾಂತ್ಯದಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೇ 20 ಮತ್ತು 21 ರಂದು ಸಣ್ಣ ಅಥವಾ ಮಧ್ಯಮ ಪ್ರಮಾಣದಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಸಾಮಾನ್ಯಕ್ಕಿಂತ ಎರಡು ಡಿಗ್ರಿ ಹೆಚ್ಚಾಗಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 40.7 ಡಿಗ್ರಿ ದಾಖಲಾಗಿದ್ದರೆ, ಬಳ್ಳಾರಿಯಲ್ಲಿ 40.6, ರಾಯಚೂರಿನಲ್ಲಿ 40.2, ವಿಜಯಪುರದಲ್ಲಿ 39.2 ಹಾಗೂ ಗದಗದಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.
ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಬುಧವಾರ ಗಾಳಿಮಳೆಗೆ ಮರಗಳು, ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿತ್ತು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement