ಬೆಂಗಳೂರು: ನಿಷೇಧಿಸುವಂತ ಉದ್ದೇಶವಿದ್ದರೇ 2016ರಲ್ಲಿ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದಿದ್ದು ಏಕೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದ್ದರ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಈಗ 2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನತೆಗೆ ಮೊದಲು ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ? ಯಾವ ಕಾರಣಕ್ಕಾಗಿ ಈಗ ಅದನ್ನು ಹಿಂತೆಗೆದುಕೊಳ್ಳಲಾಗುತ್ತಿದೆ..? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
d k
nina tara gandu , question keli anta, ninu CM alwa, astu gotilwa