ನೀಟ್‌ ಪರೀಕ್ಷೆ ಮುಂದಿಟ್ಟು ಅಂದು ಮೋದಿ ರೋಡ್‌ ಶೋ ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಈಗ ಸಿಇಟಿ ಪರೀಕ್ಷೆ ನೆನಪಿಸಿ ಮರುಪ್ರಶ್ನಿಸಿದ ಬಿ.ಎಲ್.ಸಂತೋಷ …!

posted in: ರಾಜ್ಯ | 0

ಬೆಂಗಳೂರು: ನಾಳೆ (ಮೇ 20) ಸಿಇಟಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಮಧ್ಯಾಹ್ನ ಪ್ರಮಾಣ ವಚನ ಸ್ವೀಕಾರ ಸಮಾರಂಭ ಹಮ್ಮಿಕೊಂಡಿದ್ದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಹೋಗಲು ತೊಂದರೆಯಾಗುತ್ತಿದೆ. ಹೀಗಾಗಿ ಕಂಠೀರವ ಕ್ರೀಡಾಂಗಣದಲ್ಲಿ ಬೇರೆ ದಿನ ಪ್ರಮಾಣವಚನ ಸ್ವೀಕಾರ ಸಮಾರಂಭ ನಿಗದಿ ಮಾಡಿದ್ದರೆ ಏನಾಗುತ್ತಿತ್ತು ಎಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಎರಡು ದಿನ ಮುಂದೂಡಿದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಬೆಂಗಳೂರಿನಲ್ಲಿ ಮೋದಿ ರೋಡ್‌ ಶೋ ಆಯೋಜಿಸಿದ್ದಾಗ ನೀಟ್‌ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ಸಿದ್ದರಾಮಯ್ಯ ಅವರು ಆಕ್ಷೇಪ ಎತ್ತಿದ್ದನ್ನು ಈ ಸಂದರ್ಭದಲ್ಲಿ ನೆನಪಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

‘ನೀಟ್ ಪರೀಕ್ಷಾರ್ಥಿಗಳು ಮತ್ತು ಬೆಂಗಳೂರಿನ ಜನರ ವಿರೋಧವನ್ನು ಧಿಕ್ಕರಿಸಿ ಪ್ರಧಾನಿ ಮೋದಿಯವರು ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಅತ್ಯಂತ ಬೇಜವಾಬ್ದಾರಿತನದ ನಡೆ. ಮೋದಿ ಅವರು ಪ್ರಚಾರ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಯಾರು ಹೊಣೆ?’ ಎಂದು ಬೆಂಗಲೂರಿನಲ್ಲಿ ಮೋದಿ ರೋಡ್‌ ಶೋ ಬಗ್ಗೆ ಮೇ 6ರಂದು ಸಿದ್ದರಾಮಯ್ಯ ಸರಣಿ ಟ್ವೀಟ್​ಗಳ ಮೂಲಕ ಆಕ್ಷೇಪ ಎತ್ತಿದ್ದರು.

ಈಗ ಸಿದ್ದರಾಮಯ್ಯ ಅವರ ಆ ಟ್ವೀಟ್​​ ಅನ್ನು ರಿ-ಟ್ವೀಟ್ ಮಾಡಿರುವ ಸಂತೋಷ ಅವರು, ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ಇರುವಾಗ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಿಗದಿ ಮಾಡಿರುವುದಕ್ಕೆ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದಾರೆ.
‘ನಮ್ಮ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಟ್ವೀಟ್ ಮಾಡಿ ಬಹಳ ದಿನಗಳಾಗಿಲ್ಲ. ನಾಳೆ (ಮೇ 20) ಬೆಂಗಳೂರು ಹಾಗೂ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಇದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಅವರ ಪ್ರಮಾಣವಚನ ಒಂದೆರಡು ದಿನ ತಡವಾದರೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವುದು ತಪ್ಪುತ್ತದೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್: ಡಿನೋಟಿಫಿಕೇಶನ್‌ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

 

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

1 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement