ಬಿಹಾರ ಜಾತಿಗಣತಿಗೆ ಹೈಕೋರ್ಟ್‌ ತಡೆಯಾಜ್ಞೆ ತೆರವಿಗೆ ಸುಪ್ರೀಂ ಕೋರ್ಟ್‌ ನಕಾರ

ನವದೆಹಲಿ : ಬಿಹಾರ ಸರ್ಕಾರ ಜಾತಿ ಗಣತಿ ನಡೆಸದಂತೆ ಪಾಟ್ನಾ ಹೈಕೋರ್ಟ್ ವಿಧಿಸಿದ್ದ ತಡೆಯಾಜ್ಞೆ ತೆರವಿಗೆ ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.
ಪಾಟ್ನಾ ಹೈಕೋರ್ಟ್ ಜುಲೈ 3 ರಂದು ಅಂತಿಮ ವಿಚಾರಣೆಗೆ ಪ್ರಕರಣವನ್ನು ಪಟ್ಟಿ ಮಾಡಿರುವುದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ರಾಜೇಶ್ ಬಿಂದಾಲ್ ಅವರಿದ್ದ ಪೀಠ ಬಿಹಾರ ಸರ್ಕಾರಕ್ಕೆ ರಿಲೀಫ್‌ ನೀಡಲು ನಿರಾಕರಿಸಿತು. ಒಂದು ವೇಳೆ ಜುಲೈ 3ರಂದು ಹೈಕೋರ್ಟ್‌ ವಿಚಾರಣೆ ಪ್ರಾರಂಭಿಸದಿದ್ದರೆ ಜುಲೈ 14ರಂದು ಪ್ರಕರಣ ಕೈಗೆತ್ತಿಕೊಳ್ಳಲು ಅದು ಸಮ್ಮತಿ ಸೂಚಿಸಿತು.
ಜಾತಿ ಸಮೀಕ್ಷೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಬಿಹಾರ ಸರ್ಕಾರ ಕೈಗೊಳ್ಳಲು ಮುಂದಾಗಿದ್ದ ಜಾತಿ ಗಣತಿಗೆ ಜುಲೈ 3ರವರೆಗೆ ತಡೆ ನೀಡಿ ಪಾಟ್ನಾ ಹೈಕೋರ್ಟ್ ಮೇ 4ರಂದು ಆದೇಶ ಹೊರಡಿಸಿತ್ತು.
ಆದರೆ ಸಮೀಕ್ಷೆಯ ಮಧ್ಯಂತರ ಹಂತದಲ್ಲಿ ಪ್ರಕರಣದ ಅರ್ಹತೆ ಕುರಿತು ಹೈಕೋರ್ಟ್‌ ತಪ್ಪು ನಿರ್ಧಾರ ತಳೆದಿದ್ದು ಶಾಸಕಾಂಗಕ್ಕೆ ಸಂಬಂಧಿಸಿದ ವಿಚಾರವನ್ನು ಸ್ಪರ್ಶಿಸಿದೆ ಎಂದು ಬಿಹಾರ ಸರ್ಕಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿಯಲ್ಲಿ ದೂರಿತ್ತು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಜಾತಿಗಣತಿಗೆ ಸಂಬಂಧಿಸಿದ ವೈಯಕ್ತಿಕ ಮಾಹಿತಿಯನ್ನು ಶಾಸಕರೊಂದಿಗೆ ಹಂಚಿಕೊಳ್ಳಲಾಗುತ್ತದೆ ಎಂಬ ವಾದವನ್ನು ಹೈಕೋರ್ಟ್‌ ತಪ್ಪಾಗಿ ಮಾನ್ಯಮಾಡಿದೆ. ಈ ಹಂತದಲ್ಲಿ ಸಮೀಕ್ಷೆ ನಿಲ್ಲಿಸಿದರೆ ಸರ್ಕಾರದ ಬೊಕ್ಕಸಕ್ಕೆ ಭಾರಿ ಹೊಡೆತ ಬೀಳುತ್ತದೆ ಎಂದು ವಾದಿಸಲಾಗಿತ್ತು.
ಬಿಹಾರ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಶ್ಯಾಮ್‌ ದಿವಾನ್‌ ಜಾತಿ ಗಣತಿ ಮತ್ತು ಸಮೀಕ್ಷೆ ನಡುವೆ ವ್ಯತ್ಯಾಸವಿದೆ ಎಂದು ಪ್ರತಿಪಾದಿಸಿದರು. ಇದು ಜಾತಿಗಣತಿಯಲ್ಲ, ಬದಲಿಗೆ ಸ್ವಯಂಪ್ರೇರಿತವಾಗಿ ನಡೆಯುತ್ತಿರುವ ಸಮೀಕ್ಷೆ ಎಂದು ವಾದಿಸಿದರು.
ಆದರೆ ಸುಪ್ರೀಂ ಕೋರ್ಟ್‌ “ಹೈಕೋರ್ಟ್‌ ಈ ವಿಚಾರಗಳ ಕುರಿತು ವಿಚಾರಣೆ ನಡೆಸಿದೆ” ಎಂದಿತು ಮಧ್ಯಂತರ ಆದೇಶದಲ್ಲಿ ಹೈಕೋರ್ಟ್‌ ಮಾಡಿರುವ ಪ್ರಾಥಮಿಕ ಅವಲೋಕನಗಳಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಅದು ಹೇಳಿತು.

ಇಂದಿನ ಪ್ರಮುಖ ಸುದ್ದಿ :-   ವಾಟ್ಸಾಪ್‌ನಲ್ಲಿ ಶರದ್ ಪವಾರ್‌ಗೆ ಬೆದರಿಕೆ : ಗೃಹ ಸಚಿವರ ಮಧ್ಯಸ್ಥಿಕೆ ಕೋರಿದ ಸಂಸದೆ ಸುಪ್ರಿಯಾ ಸುಳೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement