ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ : ತಬಸುಮ್ ಶೇಖ​ಳನ್ನು ಹಿಂದಿಕ್ಕಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಶೇಷ ಚೇತನ ವಿದ್ಯಾರ್ಥಿ

ಬೆಂಗಳೂರು: ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಕುಶಾಲ್​​ ನಾಯ್ಕ್ ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.
ಬೆಂಗಳೂರಿನ ಜಯನಗರ ಕಾಲೇಜಿನ ವಿದ್ಯಾರ್ಥಿನಿ ತಬಸುಮ್ ಶೇಖ್​ ಹಿಂದಿಕ್ಕಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ತಬಸುಮ್ ಶೇಖ್ 593 ಅಂಕ ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಳು.. ಆದರೆ ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ವಿಶೇಷ ಚೇತನ ವಿದ್ಯಾರ್ಥಿ ಕುಶಾಲ ನಾಯ್ಕ್ ದ್ವಿತೀಯ ಪಿಯುಸಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.
ಕುಶ​ ನಾಯ್ಕ್​ ಮೌಲ್ಯಮಾಪನ ಫಲಿತಾಂಶದಲ್ಲಿ ಕಲಾ ವಿಭಾಗದ ಐಚ್ಛಿಕ ಕನ್ನಡ ವಿಷಯದಲ್ಲಿ ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಪಡೆದಿದ್ದರಿಂದ 594 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದು ಕಾಲೇಜು ಸತತ ಎಂಟನೇ ಬಾರಿಗೆ ಪ್ರಥಮ ಸ್ಥಾನ ಪಡೆದಿದೆ.
ಇಂದು ಪಿಯು ಕಾಲೇಜಿನ ಮತ್ತೋರ್ವ ವಿದ್ಯಾರ್ಥಿ ಕೃಷ್ಣ ಒಟ್ಟು 593 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾನೆ.

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement