ಇಂದು ಸಿದ್ದರಾಮಯ್ಯ ಪ್ರಮಾಣವಚನ ಹಿನ್ನೆಲೆ : ಸಿಇಟಿ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ

posted in: ರಾಜ್ಯ | 0

ಬೆಂಗಳೂರು : ಸಿಇಟಿ ಇರುವ ದಿನವಾದ ಶನಿವಾರ (ಮೇ ೨೦) ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಇರುವುದರಿಂದ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಸಂಚಾರ ದಟ್ಟಣೆಯಲ್ಲಿ ಸಿಲುಕದಿರಲು ಬೆಂಗಳೂರು ಸಂಚಾರ ಪೊಲೀಸ್ ವಿಭಾಗದ ವಿಶೇಷ ಆಯುಕ್ತ ಡಾ.ಎಂ ಎ ಸಲೀಂ ಮಾರ್ಗಸೂಚಿ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ತೆರಳುವವರು ಕಂಠೀರವ ಸ್ಟೇಡಿಯಂ ಸಮೀಪವಿರುವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಶನಿವಾರ ಬೆಳಗ್ಗೆ 8.30ರ ಒಳಗಾಗಿ ಕೇಂದ್ರಗಳಿಗೆ ತಲುಪಬೇಕು ಎಂದು ಸೂಚನೆ ನೀಡಲಾಗಿದೆ. ಅಲ್ಲದೆ, ಬಿಷಪ್ ಕಾಟನ್ ಮಹಿಳಾ ಪದವಿಪೂರ್ವ ಕಾಲೇಜು, ಗುಡ್ ವಿಲ್ ಬಾಲಕಿಯರ ಪದವಿಪೂರ್ವ ಕಾಲೇಜು, ಸೆಂಟ್ ಜೋಸೆಫ್ಸ್ ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ ಬರೆಯುವವರು ಬೆಳಗ್ಗೆ 8:30ಕ್ಕೆ ಬರಲು ಸೂಚನೆ ನೀಡಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಪರೀಕ್ಷಾ ಕೇಂದ್ರಕ್ಕೆ ತಲುಪುವಲ್ಲಿ ಯಾವುದೇ ವಿದ್ಯಾರ್ಥಿಗೆ ಸಂಚಾರ ಸಂಬಂಧಿತ ಸಹಾಯ ಬೇಕಾದರೂ ರಸ್ತೆಗಳಲ್ಲಿ ಕರ್ತವ್ಯನಿರತ ಸಂಚಾರ ಪೊಲೀಸರನ್ನು ಸಂಪರ್ಕಿಸಿ ಸಹಾಯ ಪಡೆಯಲು ಕೋರಲಾಗಿದೆ.
ಮಧ್ಯಾಹ್ನದ ಸಿಇಟಿ ಪರೀಕ್ಷೆಗೆ ಸೇಟ್ ಜೋಸೆಫ್ ಪಿಯು ಇಂಡಿಯನ್ ಕಾಲೇಜು ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳು ಸೇಂಟ್‌ ಮಾರ್ಕ್ಸ್ ರಸ್ತೆ, ವಿಠ್ಠಲ ಮಲ್ಯ ರಸ್ತೆ ಮೂಲಕ ಬಂದು ಯುಬಿ ಸಿಟಿಯ ಮುಂಭಾಗದ ಗೇಟ್‌ನಿಂದ ಕಾಲೇಜಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ನಗರದ ಯಾವುದಾದರೂ ರಸ್ತೆಯಲ್ಲಿ ವಾಹನ ಕೆಟ್ಟು ನಿಂತಲ್ಲಿ ಅಥವಾ ಅಪಘಾತ ಸಂಭವಿಸಿದಲ್ಲಿ ಗಮನಿಸಿದ ಕೂಡಲೇ ಸಂಚಾರ ನಿಯಂತ್ರಣ ಕೋಣೆ ದೂರವಾಣಿ ಸಂಖ್ಯೆ-080-22943131 ಅಥವಾ 080-22943030 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.
ಮುಂಜಾಗ್ರತಾ ಕ್ರಮವಾಗಿ ಮೇ 20 ಮತ್ತು 21ರಂದು ಎರಡು ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆಯುವ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಿ ಎಂದು ಡಾ.ಎಂ ಎ ಸಲೀಂ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿರುವಂತೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು ಸಹ ತೆರೆಯುವಂತಿಲ್ಲ.

ಇಂದಿನ ಪ್ರಮುಖ ಸುದ್ದಿ :-   ಬಿಪೋರ್‌ ಜಾಯ್‌ ಚಂಡಮಾರುತ ; ರಾಜ್ಯದ ಈ ಜಿಲ್ಲೆಗಳಲ್ಲಿ 3-4 ದಿನ ಭಾರಿ ಮಳೆ ಸಾಧ್ಯತೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement