ಕುಮಟಾ: ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿ ಮಗನನ್ನು ಸಾಯಿಸಿದ ನಂತರ ತಾನೂ ಆತ್ಮಹತ್ಯೆಗೆ ಶರಣಾದ ತಂದೆ

posted in: ರಾಜ್ಯ | 0

ಕುಮಟಾ: ಮಗನನ್ನು ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿ ಸಾಯಿಸಿದ ನಂತರ ಬಳಿಕ ತಂದೆಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಉತ್ತರಕ್ನಡನ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದಿದೆ.
ಕುಮಟಾ ಪಟ್ಟಣದ ಹಳೇ ಮೀನು ಮಾರುಕಟ್ಟೆ ಸಮೀಪದ ಪುರಸಭೆಯ ವಸತಿ ಗೃಹಹದಲ್ಲಿ ವಾಸಿಸುತ್ತಿದ್ದ ಪೌರಕಾರ್ಮಿಕ ಶ್ರೀಧರ ಹರಿಜನ (46) ಎಂಬವರೇ ತನ್ನ ವಿಕಲಚೇತನ ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ಶುಕ್ರವಾರ ತಡರಾತ್ರಿ ತಂದೆ ಶ್ರೀಧರ ಹರಿಜನ ವಿಕಲಚೇತನ ಮಗನಾದ ಪ್ರೀತಂ ಹರಿಜನ (15) ಎಂಬಾತನನ್ನು ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿ ನಂತರ ತಾನು ಸಹ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. ಪ್ರೀತಂ ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ. ಎಷ್ಟೇ ಚಿಕಿತ್ಸೆ ನೀಡಿದರೂ ಕಡಿಮೆಯಾಗಿರಲಿಲ್ಲ. ಪ್ರೀತಮ್ ಅನಾರೋಗ್ಯದಿಂದ ಮಾನಸಿಕವಾಗಿ ಆತನ ತಂದೆ ಶ್ರೀಧರ ಕುಗ್ಗಿ ಹೋಗಿದ್ದರು.  ಮಾನಸಿಕ ಖಿನ್ನತೆಗೆ ಒಳಗಾಗಿ ತಂದೆ ಈ ಕೃತ್ಯ ಎಸಗಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಇಂದು, ಶನಿವಾರ ಮುಂಜಾನೆ ವಿಷಯ ತಿಳಿಯುತ್ತಿದ್ದಂತೆ ಅಕ್ಕ ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಕುಮಟಾ ಠಾಣೆ ಪೊಲೀಸರು, ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಒಯ್ದು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಬೆಂಗಳೂರು : ಸರಳ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಗಳ ಮದುವೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement