ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ, ಅಜ್ಜಯ್ಯನ ಹೆಸರಲ್ಲಿ ಶಿವಕುಮಾರ ಪ್ರಮಾಣ ವಚನ

posted in: ರಾಜ್ಯ | 0

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಉಪ ಮುಖ್ಯಮಂತ್ರಿಯಾಗಿ ಇಂದು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರ ಜೊತೆಗೆ 8 ಮಂದಿ ಸಚಿವರಾಗಿಪ್ರಮಾಣವಚನ ಸ್ವೀಕರಿಸಿದ್ದಾರೆ.
ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12:30 ಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋತ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ 8 ಮಂದಿ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಿದರು. ಸಿದ್ದರಾಮಯ್ಯ ಅವರು ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಅಲ್ಲದೆ, ಡಾ.ಜಿ.ಪರಮೇಶ್ವರ, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ, ಸತೀಶ ಜಾರಕಿಹೊಳಿ,
ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್ ಖಾನ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   11 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement