ನಾರಾಯಣ ನೇತ್ರಾಲಯದ ಅಧ್ಯಕ್ಷ, ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ ವಿಧಿವಶ

posted in: ರಾಜ್ಯ | 0

ಬೆಂಗಳೂರು: ನಾರಾಯಣ ನೇತ್ರಾಲಯದ  ಅಧ್ಯಕ್ಷರಾಗಿದ್ದ  ಖ್ಯಾತ ನೇತ್ರ ತಜ್ಞ ಡಾ ಕೆ. ಭುಜಂಗಶೆಟ್ಟಿ (Dr. K. Bhujang Shetty) ಅವರು ನಿಧನರಾಗಿದ್ದಾರೆ.
ಭುಜಂಗ ಶೆಟ್ಟಿ ದೇಶದ ಖ್ಯಾತ ನೇತ್ರ ತಜ್ಞರಾಗಿದ್ದರು. ಶೂಕ್ರವಾರ ಆಸ್ಪತ್ರೆಗೆ ಹೋಗಿ ಕಾರ್ಯನಿರ್ವಹಿಸಿದ್ದ ಅವರು ಸಂಜೆ 6 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತವಾಗಿತ್ತು. ಆಸ್ಪತ್ರೆಯಿಂದ ಮನೆಗೆ ವಾಪಸಾದ ಬಳಿಕ ಹೃದಯಾಘಾತವಾಗಿದ್ದು, ಕೂಡಲೇ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಸಂಜೆ ಹೃದಯಾಘಾತ ಸಂಭವಿಸಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಭುಜಂಗ ಶೆಟ್ಟಿ ಅವರು 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ್ದರು. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದಲ್ಲಿ ರೆಸಿಡೆನ್ಸಿ ತರಬೇತಿ ಪಡೆದಿದ್ದರು. 80ರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ನೇತ್ರ ಚಿಕಿಯ್ಸಾಲಯವನ್ನು ಪ್ರಾರಂಭಿಸಿದ ಡಾ. ಭುಜಂಗ ಶೆಟ್ಟಿ ನಾರಾಯಣ ನೇತ್ರಾಯಲದ ಅಧ್ಯಕ್ಷರಾಗಿದ್ದರು.
ಭುಜಂಗ ಶೆಟ್ಟಿ ನಾರಾಯಣ ನೇತ್ರಾಲಯದಲ್ಲಿ ವಿವಿಧ ಉಪವಿಭಾಗಗಳ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ ಮತ್ತು ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಕಾರಣರಾಗಿದ್ದರು. ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಯಲ್ಲಿ ನೈಪುಣ್ಯತೆ ಹೊಂದಿದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   11 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement