ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಅಲೋಕ ಮೋಹನ ನೇಮಕ

ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (Dg IGP) ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಡಾ. ಅಲೋಕಮೋಹನ (Alok Mohan) ಅವರು ನೇಮಕಗೊಂಡಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಸಿಬಿಐನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಹೀಗಾಗಿ ಅವರ ಸ್ಥಾನಕ್ಕೆ ಡಾ. ಅಲೋಕ ಮೋಹನ ಅವರನ್ನು ಸರ್ಕಾರ ನೇಮಿಸಿದೆ.
ಬಿಹಾರ ಮೂಲದ ಡಾ. ಅಲೋಕ್‌ ಮೋಹನ್‌, 1987ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ ಐಪಿಎಸ್‌ ಅಧಿಕಾರಿಯಾಗಿದ್ದಾರೆ. 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.ಸೇವಾ ಜೇಷ್ಠತೆ ಆಧಾರದಲ್ಲಿ ಅವರನ್ನೇ ಸರ್ಕಾರ ಡಿಜಿ-ಐಜಿಪಿ ಹುದ್ದೆಗೆ ಪರಿಗಣಿಸಿದೆ.

.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement