ಮೇ 22 ರಿಂದ ಮೂರು ದಿನ ವಿಧಾನಸಭೆ ಅಧಿವೇಶನ, ಆರ್​ವಿ ದೇಶಪಾಂಡೆ ಹಂಗಾಮಿ ಸ್ಪೀಕರ್

ಬೆಂಗಳೂರು: ಸೋಮವಾರದಿಂದ (ಮೇ 22) ಮೊದಲ ವಿಧಾನಸಭೆ ಅಧಿವೇಶನ ನಡೆಯಲಿದೆಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಂಗಾವಿ ಸ್ಪೀಕರ್ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ. ಒಟ್ಟು ಮೂರು ದಿನಗಳ ಕಾಲ ಅಧಿವೇಶನ ನಡೆಸಲಾಗುತ್ತದೆ ಎಂದರು.
ಮೇ 22ರಂದು ನಡೆಯುವ ಅಧಿವೇಶನದ ಹಂಗಾಮಿ ಸಭಾಪತಿಯಾಗಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಸದನ ನಡೆಸಲಿದ್ದಾರೆ. ಎಲ್ಲಾ ಶಾಸಕರ ಪ್ರಮಾಣವಚನ ಸ್ವೀಕಾರದ ನಂತರ ಸಭಾಪತಿ ಆಯ್ಕೆ ನಡೆಯಲಿದೆ. ಜುಲೈ ತಿಂಗಳಲ್ಲಿ ಬಜೆಟ್‌ ಮಂಡಿಸಲಾಗುವುದು. ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು. ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ, ಚುನಾವಣಾ ಪ್ರಣಾಳಿಕೆಯನ್ನು ಘೋಷಣೆ ಮಾಡಿದ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement