5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತಾತ್ವಿಕ ಒಪ್ಪಿಗೆ; ಸಿಎಂ ಸಿದ್ದರಾಮಯ್ಯ

posted in: ರಾಜ್ಯ | 0

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಿದ್ಧರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ 8 ಮಂದಿ ಸಚಿವರೊಂದಿಗೆ ಮೊದಲ ಸಚಿವ ಸಂಪುಟ ಸಭೆ ನಡೆಸಿದರು.
ಕಾಂಗ್ರೆಸ್ಸಿನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಯಿತು ಹಾಗೂ ಮುಂದಿನ ಸಚಿವ ಸಂಪುಟ ಸಭೆ ವೇಳೆ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿಸಿದರು.
ವಿಧಾನಸೌಧದದಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಭರವಸೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ ಯೋಜನೆಯ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ 2000 ರೂ., ಅನ್ನಭಾಗ್ಯ ಯೋಜನೆ ಮೂಲಕ 10 ಕೆ.ಜಿ ಉಚಿತ ಅಕ್ಕಿ, ನಿರುದ್ಯೋಗ ಭತ್ಯೆ, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳಿಗೆ 3000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂ. ನೀಡುವ ಐದು ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ ನೀಡಲಾಯಿತು. ವಿಸ್ತೃತವಾಗಿ ಯೋಜನೆ ರೂಪಿಸಿದ ನಂತರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಜಾರಿಗೆ ತರುತ್ತೇವೆ.ಮಾರ್ಗಸೂಚಿಗಳ ಬಗ್ಗೆಯೂ ಮುಂದಿನ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಜೂನ್‌ 11ರಂದು ಶಕ್ತಿ ಯೋಜನೆಗೆ ಚಾಲನೆ: ಕಂಡಕ್ಟರ್‌ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ...!

ಚುನಾವಣಾ ಪ್ರಣಾಳಿಕೆಯಲ್ಲಿ ಅನೇಕ ಭರವಸೆಗಳನ್ನು ನೀಡಿದ್ದೆವು. ಐದು ಪ್ರಮುಖ ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದ್ದೆವು. ಪ್ರಣಾಳಿಕೆಯಲ್ಲಿದ್ದ ಎಲ್ಲಾ ಯೋಜನೆಗಳನ್ನು ಒಮ್ಮೆಗೇ ಜಾರಿಗೊಳಿಸಲು ಸಾಧ್ಯವಾಗುವುದಿಲ್ಲ. ಪ್ರಮುಖ ಘೋಷಣೆಗಳನ್ನು ಮೊದಲ ಸಂಪುಟ ಸಭೆಯಲ್ಲಿ ಜಾರಿ ಮಾಡುತ್ತೇವೆ ಎಂದು ಹೇಳಿದ್ದೆವು. ಅದರಂತೆ ಇಂದು ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ 158 ಭರವಸೆ ಈಡೇರಿಸುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೆವು ಎಂದರು.
ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದರೆ ಆರ್ಥಿಕ ಸಂಕಷ್ಟ ಎದುರಾಗುತ್ತದೆ ಎಂದು ಪ್ರಧಾನಿ, ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು 50 ಸಾವಿರ ಕೋಟಿ ರೂಪಾಯಿ ಬೇಕು. ಎಷ್ಟೇ ಕಷ್ಟವಾದರೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

1 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement