‘5 ಗ್ಯಾರಂಟಿ ಯೋಜನೆ’ಗಳಿಗೆ ತಾತ್ವಿಕ ಅನುಮೋದನೆ ನೀಡಿದ ನಂತರ ಜಾರಿ ಮಾಡಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ಚುನಾವಣೆ ವೇಳೆ ಕರ್ನಾಟಕದ ಜನರಿಗೆ ತಾನು ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಇಂದು ಶನಿವಾರದಿಂದಲೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸುವ ಬಗ್ಗೆ ಆದೇಶ ಹೊರಡಿಸಿದೆ.
ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳಿಗೆ ಇಂದು, ಶನಿವಾರ ನಡೆದ ಸಚಿವ ಸಂಪುಟ ಸಭೆ ತಾತ್ವಿಕ ಒಪ್ಪಿಗೆ ನೀಡಿತ್ತು. ಇದಾದ ಬಳಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇದರ ಸಾಧಕ ಭಾದಕ ಪರಿಶೀಲಿಸಿ ಮುಂದಿನ ಕ್ಯಾಬಿನೆಟ್‌ ಸಭೆ ಬಳಿಕ ಇವುಗಳ ಸ್ಪಷ್ಟ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದರು.
ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿತ ಯೋಜನೆಗಳನ್ನು ಇಂದಿನಿಂದಲೇ ಜಾರಿ ಮಾಡಿ ಆದೇಶಿಸಿದ್ದಾರೆ.
ಪ್ರಥಮ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ“ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಅಂದಾಜು 50 ಸಾವಿರ ಕೋಟಿ ವೆಚ್ಚವಾಗಲಿದೆ. ಆದರೂ ಆರ್ಥಿಕ ಸಮಸ್ಯೆಯಾಗದಂತೆ 5 ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ. ಕಟ್ಟುನಿಟ್ಟಾಗಿ ತೆರಿಗೆಯನ್ನು ವಸೂಲಿ ಮಾಡಿ ಗ್ಯಾರಂಟಿ ಜಾರಿ ಮಾಡಲಾಗುವುದು. ಅಲ್ಲದೆ, ರಾಜ್ಯದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳನ್ನು ರೀ ಓಪನ್ ಮಾಡಲಾಗುತ್ತದೆ” ಎಂದರು.
“ಗೃಹ ಜ್ಯೋತಿ ಯೋಜನೆ ಅಡಿ 200 ಯೂನಿಟ್ ಎಲ್ಲ ಮನೆಗಳಿಗೆ ಉಚಿತ ವಿದ್ಯುತ್ (ತಿಂಗಳಿಗೆ 1,200 ಕೋಟಿ ವೆಚ್ಚ ಸಾಧ್ಯತೆ), ಗೃಹ ಲಕ್ಷ್ಮೀ ಯೋಜನೆ ಅಡಿ ಪ್ರತಿ ಮನೆಯ ಒಡತಿಗೆ ತಿಂಗಳಿಗೆ 2,000 ಬ್ಯಾಂಕ್‌ ಖಾತೆಗೆ ಹಾಕಲು ತೀರ್ಮಾನ. ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ನೀಡಲು ತೀರ್ಮಾನ. ನಿರುದ್ಯೋಗಿ ಪದವೀಧರರಿಗೆ ನಿರೊದ್ಯೋಗಿಗಳಾಗಿದ್ದವರಿಗೆ ಎರಡು ವರ್ಷದ ಅವಧಿಗೆ ಮಾಸಿಕ 3,000 ರೂ (ಮಧ್ಯದಲ್ಲಿ ಕೆಲಸ ಸಿಕ್ಕರೆ ಅನುದಾನ ಕಡಿತ), ಹಾಗೆಯೆ ಡಿಪ್ಲೋಮಾ ಮುಗಿಸಿ ನಿರುದ್ಯೋಗಿಗಳಾಗಿದ್ದವರಿಗೆ 1,500 ರೂ ತಿಂಗಳಿಗೆ ನೀಡಲು ತೀರ್ಮಾನ ಮಾಡಲಾಗಿದೆ. ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ (ಕರ್ನಾಟಕದ ಮಹಿಳೆಯರಾಗಿರಬೇಕು)” ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಗ್ಯಾರಂಟಿಗಳ ಬಗ್ಗೆ ವಿವರಿಸಿದರು.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement