ಬೆಂಗಳೂರಿನಲ್ಲಿ ತಮಗೆ ಝೀರೋ ಟ್ರಾಫಿಕ್ ಬೇಡ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಂಚಾರದ ವೇಳೆ ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿಗಳನ್ನು ತಪ್ಪಿಸಲು ಪ್ರಮುಖ ಹೆಜ್ಜೆ ಇರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಸಂಚರಿಸುವ ವೇಳೆ‌ ಝೀರೋ ಟ್ರಾಫಿಕ್ (ಶೂನ್ಯ ಸಂಚಾರ) ವ್ಯವಸ್ಥೆ ಕಲ್ಪಿಸುವುದು ಬೇಡ ಎಂದು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ.
ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರು ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರಿ ಸ್ವೀಕರಿಸಿದ ಒಂದೇ ದಿನದಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಬೆಂಗಳೂರಿನಲ್ಲಿ ತಮಗೆ ಝಿರೋ ಟ್ರಾಫಿಕ್ ಬೇಡ ಎಂದಿದ್ದರು. ಇದೀಗ ಬೊಮ್ಮಾಯಿ ಮಾದರಿಯನ್ನು ಸಿದ್ದರಾಮಯ್ಯನವರೂ ಸಹ ಅನುಸರಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement