ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಇನ್ಫೋಸಿಸ್ ಉದ್ಯೋಗಿ ಸಾವು

posted in: ರಾಜ್ಯ | 0

ಬೆಂಗಳೂರು: ನಗರದಲ್ಲಿ ಇಂದು ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಇನ್ಫೋಸಿಸ್‌ ಕಂಪನಿಯ ಮಹಿಳಾ ಉದ್ಯೋಗಿಯೊಬ್ಬರು ಸಾವಿಗೀಡಾಗಿದ್ದಾರೆ.
ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ 23 ವರ್ಷದ ಭಾನುರೇಖಾ ಎಂಬುವರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ನೀರಿನಲ್ಲಿ ಕಾರು ಮುಳುಗಿದ್ದು, ಆಂಧ್ರಪ್ರದೇಶದ ವಿಜಯವಾಡದ ಒಂದೇ ಕುಟುಂಬದ ಆರು ಮಂದಿಯನ್ನು ರಕ್ಷಿಸಲಾಗಿದೆ. ಆದರೆ ಕಾರಿನಲ್ಲಿ ನೀರು ತುಂಬಿ ಅಸ್ವಸ್ಥಗೊಂಡಿದ್ದ ಭಾನುರೇಖಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿದ್ದ ಕುಟುಂಬಕ್ಕೆ ಬೆಂಗಳೂರು ತೋರಿಸಲು ಕರೆಯಿಸಿಕೊಂಡಿದ್ದರು ಎನ್ನಲಾಗಿದೆ
ಭಾರೀ ಮಳೆಗೆ ಮಹಾಲಕ್ಷ್ಮೀ ಲೇಔಟ್ ನಲ್ಲಿ ಮನೆಗಳು ಮಳೆ ನೀರಿನಲ್ಲಿ ಮುಳುಗುವಂತೆ ಆಗಿದೆ. ಮನೆಯ ಮುಂದೆ ನಿಲ್ಲಿಸಿದ ಕಾರು, ಬೈಕ್ ಸೇರಿದಂತೆ ಇತರೆ ವಾಹನಗಳು ಮುಳುಗಿದೆ ಎನ್ನಲಾಗಿದೆ..

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಜೆ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಟಿ ಮೃತ ಭಾನುರೇಖಾ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಮಳೆಯಿಂದಾಗಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ತಕ್ಷಣ ದಾಖಲಿಸಿಕೊಳ್ಳದೆ ವಿಳಂಬ ಮಾಡಿದ್ದರ ಕುರಿತು ಮುಖ್ಯಮಂತ್ರಿಯವರು ತನಿಖೆಗೆ ಆದೇಶಿದ್ದಾರೆ.
ಮಳೆ ಅನಾಹುತದ ಮಾಹಿತಿ ದೊರೆಯುತ್ತಿದ್ದಂತೆ ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರು ಮತ್ತು ಬಿಬಿಎಂಪಿ ಆಯುಕ್ತರ ಜತೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ನಗರದಲ್ಲಿ ಮಳೆಯಿಂದ ಉರುಳಿ ಬಿದ್ದಿರುವ ಮರಗಳನ್ನು ತಕ್ಷಣ ತೆರವುಗೊಳಿಸಬೇಕು, ಮಳೆ ಅನಾಹುತದಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರಿ ಸಾರ್ವಜನಿಕರಿಗೆ ತೊಂದರೆ ಆದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಮಕ್ಕಳ ಹಿತದೃಷ್ಟಿಯಿಂದ ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

5 ಲಕ್ಷ ರೂ. ಪರಿಹಾರ
ಆಂಧ್ರದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದು ಮಳೆಗೆ ಸಿಲುಕಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಳೆಯಿಂದ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement