ರಾಜ್ಯದ ನೂತನ ಅಡ್ವೊಕೇಟ್‌ ಜನರಲ್‌ ಆಗಿ ಶಶಿಕಿರಣ ಶೆಟ್ಟಿ ನೇಮಕ

ಬೆಂಗಳೂರು : ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಹೈಕೋರ್ಟ್‌ ಹಿರಿಯ ವಕೀಲರಾದ ಶಶಿಕಿರಣ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಶಿಕಿರಣ ಶೆಟ್ಟಿ ಅವರು ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರ ಪುತ್ರರು. ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿ ಮುಗಿದ ನಂತರ ಅಡ್ವೊಕೇಟ್ ಜನರಲ್ ಆಗಿದ್ದ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದರು. ತೆರವಾಗಿದ್ದ ಸ್ಥಾನಕ್ಕೆ ಶಶಿಕಿರಣ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಅಡ್ವೊಕೇಟ್ ಜನರಲ್ ಅವರನ್ನು ನೇಮಕ ಮಾಡಲು ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರ ನೀಡಲಾಗಿತ್ತು.
ನೇಮಕಾತಿಗೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಶಶಿಕಿರಣ ಶೆಟ್ಟಿ ಅವರು, ನ್ಯಾಯಾಲಯದ ಕೆಲಸ ನಿರ್ವಹಣೆಯನ್ನು ಉತ್ತಮಗೊಳಿಸುವು ನಮ್ಮ ಆದ್ಯತೆಯಾಗಿದೆ. ಬಾಕಿ ಉಳಿದಿರುವ ಪ್ರಕರಣಗಳನ್ನು ಆದಷ್ಟು ಬೇಗ ಇತ್ಯರ್ಥಗೊಳಿಸುವುದು ಹಾಗೂ ಕಾನೂನು ಇಲಾಖೆಯನ್ನು ಬಲಪಡಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement