ಅಕಾಡೆಮಿಗಳು, ರಂಗಾಯಣ, ಪ್ರಾಧಿಕಾರದ ಅಧ್ಯಕ್ಷರ ನಾಮನಿರ್ದೇಶನ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ

posted in: ರಾಜ್ಯ | 0

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕಾಡೆಮಿ / ರಂಗಾಯಣ / ಪ್ರಾಧಿಕಾರಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ಜಾನಪದ ಅಕಾಡೆಮಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಶಿಲ್ಪ ಕಲಾ ಅಕಾಡೆಮಿ, ಲಲಿತಾ … Continued

ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ : ಗುಜರಾತ್ ಮೂಲದ ಎನ್‌ಜಿಒ ದಾಖಲಿಸಿದ ಪ್ರಕರಣದಲ್ಲಿ ದೆಹಲಿ ಹೈಕೋರ್ಟಿನಿಂದ ಬಿಬಿಸಿಗೆ ನೋಟಿಸ್

ನವದೆಹಲಿ: ಭಾರತ, ಅದರ ನ್ಯಾಯಾಂಗ ಮತ್ತು ಪ್ರಧಾನಿಯ ಪ್ರತಿಷ್ಠೆಗೆ ‘ಇಂಡಿಯಾ: ದ ಮೋದಿ ಕ್ವೆಶ್ಚನ್’ ಹೆಸರಿನ ಸಾಕ್ಷ್ಯಚಿತ್ರ ಮಸಿ ಬಳಿದಿದೆ ಎಂದು ಆರೋಪಿಸಿ ಹೂಡಲಾದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಸೋಮವಾರ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಂಪನಿಗೆ (ಬಿಬಿಸಿ) ಸಮನ್ಸ್‌ ನೀಡಿದೆ. ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಸಮನ್ಸ್ ಜಾರಿಗೊಳಿಸಿದ ನಂತರ ಸೆಪ್ಟೆಂಬರ್‌ನಲ್ಲಿ ವಿಚಾರಣೆ ನಡೆಸುವುದಕ್ಕಾಗಿ … Continued

ಸಿಎಂ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ಹುದ್ದೆಗಳಿಗೆ ನೇಮಕ

posted in: ರಾಜ್ಯ | 0

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಪ್ರಮುಖ ಇಲಾಖೆಗಳ ಮುಖ್ಯಸ್ಥರನ್ನು ಬದಲಾಯಿಸಿ ತಮ್ಮ ಆಪ್ತ ಅಧಿಕಾರಿಗಳನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿ ಅಧಿಕಾರಕ್ಕೆ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೊಂದು ಹುದ್ದೆಗಳಿಗೆ ನೇಮಕ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಪ್ತ ಕಾರ್ಯದರ್ಶಿಯಾಗಿ ಡಾ. ವೆಂಕಟೇಶಯ್ಯ ಅವರು … Continued

ರಾಜ್ಯದ ನಿಗಮ- ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರ ನೇಮಕ ರದ್ದು

posted in: ರಾಜ್ಯ | 0

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಮೊದಲ ಅಧಿವೇಶನದ ದಿನವೇ ರಾಜ್ಯದ ಎಲ್ಲ ನಿಗಮ ಮಂಡಳಿಗಳಿಗೆ ಈ ಹಿಂದಿನ (ಬಿಜೆಪಿ) ಸರ್ಕಾರದಲ್ಲಿ ನೇಮಕ ಮಾಡಲಾಗಿದ್ದ ಅಧ್ಯಕ್ಷರು, ನಿರ್ದೇಶಕರು ಹಾಗೂ ಪದಾಧಿಕಾರಿಗಳ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ನಿಗಮ ಮಂಡಳಿಗಳಿಗೆ ನಿಡಲಾದ ಅನುದಾನ ಹಾಗೂ ಹಣ ಹಂಚಿಕೆಯನ್ನು ತತಕ್ಷಣದಿಂದಲೇ ತಡೆ ಹಿಡಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ … Continued

ಹಿಂದುತ್ವ-ಗೋಮಾತೆ ಹೆಸರಲ್ಲಿ ಯತ್ನಾಳ, ಡಿಕೆ ಶಿವಕುಮಾರ ಹೆಸರಲ್ಲಿ ಬಸವರಾಜ ಶಿವಗಂಗಾ ಪ್ರಮಾಣವಚನ

posted in: ರಾಜ್ಯ | 0

ಬೆಂಗಳೂರು : ನೂತನವಾಗಿ ಆಯ್ಕೆಗೊಂಡಿರುವ ಎಲ್ಲ ಶಾಸಕರಿಗೂ ಇಂದು ಸೋಮವಾರದಿಂದ ಆರಂಭವಾಗಿರುವ ವಿಧಾನಸಭೆ ಅಧಿವೇಶನದಲ್ಲಿ ಪ್ರಮಾಣವಚನ ಬೋಧನೆ ಕಾರ್ಯಕ್ರಮ ನಡೆಯುತ್ತಿದೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಹಿಂದುತ್ವ ಹಾಗೂ ಗೋಮಾತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಶಾಸಕ ಬಸವರಾಜ ಶಿವಗಂಗಾ ಅವರು ಡಿ ಕೆ ಶಿವಕುಮಾರ ಅವರ ಹೆಸರಿನಲ್ಲಿ ಅವರು ಪ್ರಮಾಣವಚನ … Continued

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; ಕರ್ಫ್ಯೂ ಜಾರಿ, ಸೇನೆ ನಿಯೋಜನೆ

ಇಂಫಾಲ: ಮಣಿಪುರ ಸೋಮವಾರ (ಮೇ 22) ಮತ್ತೆ ಉದ್ವಿಗ್ನಗೊಂಡಿದೆ. ಇಂಫಾಲ ಜಿಲ್ಲೆಯಲ್ಲಿ ಉದ್ರಿಕ್ತ ಗುಂಪುಗಳು ಮನೆಗಳಿಗೆ ಬೆಂಕಿ ಹಚ್ಚಿದ ಘಟನೆಗಳು ವರದಿಯಾಗಿವೆ. ಮಣಿಪುರ ಹಿಂಸಾಚಾರ ವರದಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಮತ್ತೆ ನಿಷೇಧಾಜ್ಞೆ ಜಾರಿಗೊಳಿಸಿದೆ. ಇದಕ್ಕೂ ಮೊದಲು ನಿಷೇಧಾಜ್ಞೆಯನ್ನು ಬೆಳಿಗ್ಗೆ 6ರಿಂದ ಸಂಜೆ 4ರವರೆಗೆ ಸಡಿಲಿಸಲಾಗಿತ್ತು. … Continued

ಬಿಜೆಪಿ ಸರ್ಕಾರದ ಅವಧಿಯ ಎಲ್ಲ ಕಾಮಗಾರಿಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ

posted in: ರಾಜ್ಯ | 0

ಬೆಂಗಳೂರು : ರಾಜ್ಯದ ಹಿಂದಿನ ಬಿಜೆಪಿ ಸರ್ಕಾರ ಕೈಗೊಂಡಿದ್ದ ಎಲ್ಲ ಇಲಾಖೆಗಳ ಕಾಮಗಾರಿಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಲಾಖೆಗಳ ಅಧೀನಕ್ಕೊಳಪಡುವ ನಿಗಮ ಮಂಡಳಿ/ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲ ಮುಂದಿನ ಹಣ ಬಿಡುಗಡೆ/ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ಆದೇಶದಲ್ಲಿ ತಿಳಿಸಲಾಗಿದೆ. … Continued

ಖರ್ಗೆ, ರಾಹುಲ್ ಗಾಂಧಿ ಭೇಟಿಯಾದ ಬಿಹಾರ ಸಿಎಂ ನಿತೀಶಕುಮಾರ : ಪಾಟ್ನಾದಲ್ಲಿ ಪ್ರತಿಪಕ್ಷಗಳ ಬೃಹತ್‌ ಸಭೆ ಆಯೋಜಿಸಲು ಯೋಜನೆ

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಡುವೆ ನಡೆದ ಸಭೆಯಲ್ಲಿ ಪಾಟ್ನಾದಲ್ಲಿ ವಿರೋಧ ಪಕ್ಷಗಳ ನಾಯಕರ ಬೃಹತ್ ಸಭೆ ಮತ್ತು ಬಿಜೆಪಿಯೇತರ ಪಕ್ಷಗಳ ಮೈತ್ರಿ ರಚನೆಯ ಮಾರ್ಗಸೂಚಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ ಮತ್ತು … Continued

ವಿಶ್ವದ ಅತಿ ಎತ್ತರದ ಪರ್ವತ ಮೌಂಟ್ ಎವರೆಸ್ಟ್ ಶಿಖರವನ್ನು 27ನೇ ಬಾರಿಗೆ ಏರಿ ವಿಶ್ವ ದಾಖಲೆ ಸರಿಗಟ್ಟಿದ ಪಸಾಂಗ್ ದಾವಾ ಶೆರ್ಪಾ

ಕಠ್ಮಂಡು: ಪಸಾಂಗ್ ದಾವಾ ಶೆರ್ಪಾ ಸೋಮವಾರ 27ನೇ ಬಾರಿಗೆ ವಿಶ್ವದ ಅತ್ಯಂತ ಎತ್ತರವಾದ ಪರ್ವತ ಶಿಖರ ಮೌಂಟ್ ಎವರೆಸ್ಟ್ ಅನ್ನು ಏರುವ ಮೂಲಕ ಕಾಮಿ ರೀಟಾ ಶೆರ್ಪಾ ಅವರು ಈ ಹಿಂದೆ ನಿರ್ಮಿಸಿದ ಅತ್ಯಧಿಕ ಸಂಖ್ಯೆಯಲ್ಲಿ ಮೌಂಟ್ ಎವರೆಸ್ಟ್ ಏರಿದ್ದ ವಿಶ್ವದಾಖಲೆಯನ್ನು ಸರಿಗಟ್ಟಿದ್ದಾರೆ. 46 ವರ್ಷದ ಪರ್ವತಾರೋಹಿ ಇಂದು, ಸೋಮವಾಋ ಬೆಳಗ್ಗೆ 8:25ಕ್ಕೆ 27ನೇ ಬಾರಿಗೆ … Continued

ಕನ್ನಡದ ಅಮೃತವರ್ಷಿಣಿ ಖ್ಯಾತಿಯ ದಕ್ಷಿಣ ಭಾರತದ ಖ್ಯಾತ ನಟ ಶರತ್ ಬಾಬು ನಿಧನ

ಹೈದರಾಬಾದ್‌ : ಬಹುಭಾಷಾ ನಟ ಶರತ್‌ ಬಾಬು ಅವರು ಇಂದು, ಸೋಮವಾರ ನಿಧನರಾಗಿದ್ದಾರೆ. ಶರತ್‌ ಬಾಬು ಅವರಿಗೆ 71 ವರ್ಷ ವಯಸ್ಸಾಗಿತ್ತು. ಶರತ್‌ ಬಾಬು ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಕಳೆದ ತಿಂಗಳು ಶರತ್‌ ಬಾಬು, ಹೈದರಾಬಾದಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ಪರಿಸ್ಥಿತಿ … Continued