ಬೆಂಗಳೂರು: ಇಂದಿನಿಂದ (ಮೇ 22ರಿಂದ 24ರ ವರೆಗೆ) ಮೂರು ದಿನಗಳ ಕಾಲ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನ ಆರಂಭವಾಗಲಿದೆ.
ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಹಾಗೂ ಕೊನೆಯ ದಿನ ನೂತನ ಸಭ್ಯಾಧ್ಯಕ್ಷರ ಆಯ್ಕೆ ನಡೆಯಲಿದೆ.
ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಅಧಿವೇಶನ ನಡೆಸಲು ಹಾಗೂ ಸಭಾಧ್ಯಕ್ಷರ ಆಯ್ಕೆ ನಡೆಸಲು ತೀರ್ಮಾನಿಸಿದ್ದು, ಈ ಸಂಬಂಧ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಇಂದು, ಸೋಮವಾರ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಲು ಹಿರಿಯ ಸದಸ್ಯ ಆರ್.ವಿ.ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಅಧಿವೇಶನದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 6 ರಿಂದ ಬುಧವಾರ ಮಧ್ಯರಾತ್ರಿ 12ರ ವರೆಗೆ ವಿಧಾನಸೌಧದ ಸುತ್ತಲ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸುವುದಾಗಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ನಿಮ್ಮ ಕಾಮೆಂಟ್ ಬರೆಯಿರಿ