ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು: ಚಿತ್ರದುರ್ಗದ ಮುರುಘರಾಜೇಂದ್ರ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ ಎಸ್‌ ವಸ್ತ್ರದ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ರದ್ದುಪಡಿಸಿದೆ.
ಆದಾಗ್ಯೂ, ಪರ್ಯಾಯ ವ್ಯವಸ್ಥೆಯಾಗುವವರೆಗೆ ಆಡಳಿತಾಧಿಕಾರಿ ಮುಂದಿನ ಒಂದು ತಿಂಗಳು ದೈನಂದಿನ ಚಟುವಟಿಕೆ ಮುಂದುವರಿಸಲು ನ್ಯಾಯಾಲಯ ಅನುಮತಿ ನೀಡಿದೆ.
ಚಿತ್ರದುರ್ಗದ ಡಿ ಎಸ್‌ ಮಲ್ಲಿಕಾರ್ಜುನ ಒಳಗೊಂಡು ಮೂವರು ಹಾಗೂ ಇನ್ನಿತರರು ಪ್ರತ್ಯೇಕವಾಗಿ ಸಲ್ಲಿಸಿದ್ದ ಅರ್ಜಿಗಳನ್ನು ವಿಸ್ತೃತವಾಗಿ ವಿಚಾರಣೆ ನಡೆಸಿ ಏಪ್ರಿಲ್‌ 17ರಂದು ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಇಂದು ಆದೇಶ ಪ್ರಕಟಿಸಿತು ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ವರದಿ ಪ್ರಕಾರ, ಆದೇಶವನ್ನು ರದ್ದುಪಡಿಸಲಾಗಿದೆ. ಮಠದ ಭಕ್ತರು ಮತ್ತು ವೀರಶೈವ ಸಮುದಾಯದ ಪ್ರಮುಖ ವ್ಯಕ್ತಿಗಳು ಮಠ ಮತ್ತು ಅದರ ಸಂಬಂಧಿತ ಶೈಕ್ಷಣಿಕ ಸಂಸ್ಥೆಗಳ ಆಡಳಿತಕ್ಕೆ ಸಂಬಂಧಿಸಿದಂತೆ ಸೂಕ್ತ ಯೋಜನೆ ರೂಪಿಸುವವರೆಗೆ ನಾಲ್ಕು ವಾರಗಳ ಕಾಲ ದೈನಂದಿನ ಚಟುವಟಿಕೆ ನಡೆಸಲು ಈಗ ನೇಮಕ ಮಾಡಿರುವ ಆಡಳಿತಾಧಿಕಾರಿಗೆ ಅನುಮತಿಸಲಾಗಿದೆ” ಎಂದು ಪೀಠವು ಆದೇಶದಲ್ಲಿ ಹೇಳಿದೆ.
ಪೋಕ್ಸೊ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ ಅಡಿ ಬಂಧಿತರಾಗಿ ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಸಂಸ್ಥೆಯ ನಿರ್ವಹಣೆ ಹಾಗೂ ದಿನನಿತ್ಯದ ಕಾರ್ಯಚಟುವಟಿಕೆ ಹಾಗೂ ಮೇಲುಸ್ತುವಾರಿ ನಡೆಸಲು ಮಠದ ಚರ-ಸ್ಥಿರ ಆಸ್ತಿಗಳನ್ನು ಸಂರಕ್ಷಿಸಲು ಹಾಗೂ ಸಂಸ್ಥೆಯ ಹಣ ದುರುಪಯೋಗವಾಗದಂತೆ ಲೆಕ್ಕಪತ್ರ ನಿರ್ವಹಿಸಲು ಸಂವಿಧಾನದ 167, 31 (ಎ) ವಿಧಿಯ ಅಡಿ ವಸ್ತ್ರದ ಅವರನ್ನು ಆಡಳಿತಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿತ್ತು.

ಪ್ರಮುಖ ಸುದ್ದಿ :-   ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement