ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ : ಗುಜರಾತ್ ಮೂಲದ ಎನ್‌ಜಿಒ ದಾಖಲಿಸಿದ ಪ್ರಕರಣದಲ್ಲಿ ದೆಹಲಿ ಹೈಕೋರ್ಟಿನಿಂದ ಬಿಬಿಸಿಗೆ ನೋಟಿಸ್

ನವದೆಹಲಿ: ಭಾರತ, ಅದರ ನ್ಯಾಯಾಂಗ ಮತ್ತು ಪ್ರಧಾನಿಯ ಪ್ರತಿಷ್ಠೆಗೆ ‘ಇಂಡಿಯಾ: ದ ಮೋದಿ ಕ್ವೆಶ್ಚನ್’ ಹೆಸರಿನ ಸಾಕ್ಷ್ಯಚಿತ್ರ ಮಸಿ ಬಳಿದಿದೆ ಎಂದು ಆರೋಪಿಸಿ ಹೂಡಲಾದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಸೋಮವಾರ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಂಪನಿಗೆ (ಬಿಬಿಸಿ) ಸಮನ್ಸ್‌ ನೀಡಿದೆ.
ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಸಮನ್ಸ್ ಜಾರಿಗೊಳಿಸಿದ ನಂತರ ಸೆಪ್ಟೆಂಬರ್‌ನಲ್ಲಿ ವಿಚಾರಣೆ ನಡೆಸುವುದಕ್ಕಾಗಿ ಪ್ರಕರಣವನ್ನು ಪಟ್ಟಿ ಮಾಡಿದರು.
“ಬಿಬಿಸಿ ಸಾಕ್ಷ್ಯಚಿತ್ರ ದೇಶ, ನ್ಯಾಯಾಂಗಸ ಪ್ರತಿಷ್ಠೆ ಹಾಗೂ ದೇಶದ ಪ್ರಧಾನಿ ವಿರುದ್ಧ ಮಾನಹಾನಿಕರ ಆರೋಪ ಮಾಡಲಾಗಿದೆ ಎಂದು ವಾದಿಸಲಾಗಿದೆ. ಎಲ್ಲಾ ಅನುಮತಿಸುವ ವಿಧಾನಗಳ ಮೂಲಕ ಪ್ರತಿವಾದಿಗಳಿಗೆ ನೋಟಿಸ್ ನೀಡಿ” ಎಂದು ಏಕಸದಸ್ಯ ಪೀಠ ಆದೇಶಿಸಿತು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ʼಜಸ್ಟಿಸ್ ಆನ್ ಟ್ರಯಲ್ʼ ಎಂಬ ಗುಜರಾತ್ ಮೂಲದ ಲಾಭೋದ್ದೇಶವಿಲ್ಲದ ಸಂಸ್ಥೆ ಮಾನನಷ್ಟ ಮೊಕದ್ದಮೆ ಹೂಡಿದೆ. ಸಂಸ್ಥೆಯ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್ ಸಾಳ್ವೆ, ಅವರು ಭಾರತ ಮತ್ತು ನ್ಯಾಯಾಂಗ ಸೇರಿದಂತೆ ಇಡೀ ವ್ಯವಸ್ಥೆಗೆ ಸಾಕ್ಷ್ಯಚಿತ್ರ ಕಳಂಕ ತಂದಿದೆ ಎಂದರು.
ಭಾರತ ಸರ್ಕಾರ ಸಾಕ್ಷ್ಯಚಿತ್ರ ನಿಷೇಧಿಸಿ ಹಿಂದೆ ಬಿಜೆಪಿ ನಾಯಕ ಬಿನಯಕುಮಾರ ಸಿಂಗ್ ಅವರು ತಮ್ಮ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ ಮಾನನಷ್ಟ ಮೊಕದ್ದಮೆಯ ಕುರಿತು ದೆಹಲಿಯ ಜಿಲ್ಲಾ ನ್ಯಾಯಾಲಯವು ಬಿಬಿಸಿಗೆ ಸಮನ್ಸ್ ಜಾರಿ ಮಾಡಿತ್ತು.
ಸಿದ್ದರೂ, ವಿಕಿಪೀಡಿಯ ಪುಟ ಸಾಕ್ಷ್ಯಚಿತ್ರವನ್ನು ವೀಕ್ಷಿಸಲು ಲಿಂಕ್‌ಗಳನ್ನು ಒದಗಿಸುತ್ತದೆ ಮತ್ತು ಸಾಕ್ಷ್ಯಚಿತ್ರದ ವಸ್ತುವಿಷಯ ಇಂಟರ್ನೆಟ್ ಆರ್ಕೈವ್‌ನಲ್ಲಿ ಇನ್ನೂ ಲಭ್ಯವಿದೆ ಎಂದು ಸಿಂಗ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಬಿಬಿಸಿ ಅರ್ಜಿ ಆಲಿಸಲು ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿ ಇಲ್ಲ ಎಂದಿತ್ತು. ಆ ಪ್ರಕರಣದ ವಿಚಾರಣೆ ಮೇ 26ರಂದು ನಡೆಯಲಿದೆ.
ಏಪ್ರಿಲ್‌ನಲ್ಲಿ, ಸಾಕ್ಷ್ಯಚಿತ್ರದ ಪ್ರದರ್ಶನ ಆಯೋಜಿಸಿದ್ದಕ್ಕಾಗಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ರಾಷ್ಟ್ರೀಯ ಕಾರ್ಯದರ್ಶಿ ಲೋಕೇಶ್ ಚುಗ್ ಅವರನ್ನು ವಿವಿಯಿಂದ ಡಿಬಾರ್‌ ಮಾಡಿದ್ದ ದೆಹಲಿ ವಿಶ್ವವಿದ್ಯಾಲಯ (ಡಿಯು) ಆದೇಶವನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿತ್ತು.

ಇಂದಿನ ಪ್ರಮುಖ ಸುದ್ದಿ :-   ಜೂನ್ 23 ರಂದು ನಿತೀಶ್ ಕುಮಾರ್ ಕರೆದ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುವೆ: ಶರದ್ ಪವಾರ್

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement