ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾದ ಮೇಲ್ಮೈ ಸುಳಿಗುಳಿಯಿಂದಾಗಿ ರಾಜ್ಯಾದ್ಯಂತ ಇನ್ನೆರಡು ದಿನ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾಔಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ, ಕಲಬುರಗಿ, ಯಾದಗಿರಿ ಹಾಗೂ ಬಳ್ಳಾರಿ, ವಿಜಯನಗರ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ ಮತ್ತು ರಾಯಚೂರಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ