ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೊದಲ ಅಧಿವೇಶನದ ದಿನವೇ ರಾಜ್ಯದ ಎಲ್ಲ ನಿಗಮ ಮಂಡಳಿಗಳಿಗೆ ಈ ಹಿಂದಿನ (ಬಿಜೆಪಿ) ಸರ್ಕಾರದಲ್ಲಿ ನೇಮಕ ಮಾಡಲಾಗಿದ್ದ ಅಧ್ಯಕ್ಷರು, ನಿರ್ದೇಶಕರು ಹಾಗೂ ಪದಾಧಿಕಾರಿಗಳ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ.
ಅಲ್ಲದೆ, ನಿಗಮ ಮಂಡಳಿಗಳಿಗೆ ನಿಡಲಾದ ಅನುದಾನ ಹಾಗೂ ಹಣ ಹಂಚಿಕೆಯನ್ನು ತತಕ್ಷಣದಿಂದಲೇ ತಡೆ ಹಿಡಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಸರ್ಕಾರದ ರಚಿಸಿದ ಬೆನ್ನಲ್ಲೇ ಮೊದಲ ಅಧಿವೇಶನದ ಮೊದಲ ದಿನವಾದ ಸೋಮವಾರ, ಕಳೆದ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಎಲ್ಲ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗಿದ್ದ ಅಧ್ಯಕ್ಷರು, ನಿರ್ದೇಶಕರು ಸೇರಿದಂತೆ ಎಲ್ಲ ಪದಾಧಿಕಾರಿಗಳ ಅಧಿಕಾರವನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.
ಅಲ್ಲದೆ, ತಕ್ಷಣದಿಂದಲೇ ನಿಗಮ ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರು ಉಪಯೋಗಿಸುತ್ತಿದ್ದ ಎಲ್ಲ ಸರ್ಕಾರಿ ಸೌಲಭ್ಯಗಳನ್ನು ವಾಪಸ್ ಪಡೆಯಲಾಗುತ್ತಿದೆ.
ಹತ್ತು ತಿಂಗಳಿಗೇ ಅಧಿಕಾರ ಮುಕ್ತಾಯ:
ಕರ್ನಾಟಕದ ವಿವಿಧ ನಿಗಮ ಮಂಡಳಿಗಗಳಿಗೆ ಹೊಸ ಅಧ್ಯಕ್ಷರನ್ನ ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿತ್ತು. ಒಟ್ಟು 22 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ 2022ರ ಜುಲೈ 25ರಂದು ಸರ್ಕಾರ ಆದೇಶ ಹೊರಡಿಸಿತ್ತು. ಈ ನಾಯಕರಿಗೆ ನಿಗಮ ಮಂಡಳಿಗಳು ಹಾಗೂ ಪ್ರಾಧಿಕಾರಗಳ ಆಡಳಿತ 10 ತಿಂಗಳಿಗೇ ಮುಕ್ತಾಯಗೊಂಡಿದೆ.
ನಿಗಮ ಮಂಡಳಿಗಳ ಕಾಮಗಾರಿಗಳಿಗೆ ತಡೆ:
ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರದಿಂದ ರಾಜ್ಯದ ಎಲ್ಲ ಇಲಾಖೆ, ಅಕಾಡೆಮಿಗಳು, ನಿಗಮ ಹಾಗೂ ಮಂಡಳಿಗಳಲ್ಲಿ ಚಾಲನೆ ನೀಡಲಾಗಿದ್ದ ಕಾಮಗಾರಿಗಳಿಗೆ ತಡೆ ನೀಡಲಾಗಿದೆ. ನಿಗಮ, ಮಂಡಳಿ, ಪ್ರಾಧಿಕಾರಗಳ ಕಾಮಗಾರಿಗಳಿಗೆ ತಡೆ ನೀಡಿ ಆದೇಶ ಹೊರಡಿಸಲಾಗಿದೆ. ಜೊತೆಗೆ, ಕಾಮಗಾರಿಗಳಿಗೆ ಸಂಬಂಧಿಸಿದ ಎಲ್ಲ ಮುಂದಿನ ಹಣ ಬಿಡುಗಡೆ, ಹಣ ಪಾವತಿಗಳನ್ನು ತಕ್ಷಣದಿಂದ ತಡೆ ಹಿಡಿಯುವಂತೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕರೂಪ್ ಖೌರ್ ಅವರು ಹಣ ಬಿಡುಗಡೆಯನ್ನು ತಡೆಹಿಡಿಯುವಂತೆ ಆದೇಶಿಸಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ನಿಮ್ಮ ಕಾಮೆಂಟ್ ಬರೆಯಿರಿ