ಕನ್ನಡದ ಅಮೃತವರ್ಷಿಣಿ ಖ್ಯಾತಿಯ ದಕ್ಷಿಣ ಭಾರತದ ಖ್ಯಾತ ನಟ ಶರತ್ ಬಾಬು ನಿಧನ

ಹೈದರಾಬಾದ್‌ : ಬಹುಭಾಷಾ ನಟ ಶರತ್‌ ಬಾಬು ಅವರು ಇಂದು, ಸೋಮವಾರ ನಿಧನರಾಗಿದ್ದಾರೆ. ಶರತ್‌ ಬಾಬು ಅವರಿಗೆ 71 ವರ್ಷ ವಯಸ್ಸಾಗಿತ್ತು.
ಶರತ್‌ ಬಾಬು ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಕಳೆದ ತಿಂಗಳು ಶರತ್‌ ಬಾಬು, ಹೈದರಾಬಾದಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ಪರಿಸ್ಥಿತಿ ಬಹಳ ಗಂಭೀರವಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ ವೆಂಟಿಲೇಟರ್‌ ನೀಡಿ ಚಿಕಿತ್ಸೆ ನೀಡಲಾಗಿತ್ತು. ಇದಕ್ಕೂ ಮುನ್ನ ಶರತ್‌ ಬಾಬು ಅವರಿಗೆ ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿಂದ ಡಿಸ್ಚಾರ್ಜ್‌ ಆಗಿ ಮನೆಗೆ ಬಂದ ಕೆಲವು ದಿನಗಳಲ್ಲಿ ಅವರ ಆರೋಗ್ಯ ಪರಿಸ್ಥಿತಿ ಮತ್ತೆ ಕ್ಷೀಣಿಸಿದ್ದರಿಂದ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶರತ್ ಬಾಬು ಅವರನ್ನು ಏಪ್ರಿಲ್​ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ತುಸು ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್​ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಏಪ್ರಿಲ್ 20 ರ ಸುಮಾರಿಗೆ ಹೈದರಾಬಾದ್​ನ ಗಚ್ಚಿಬೌಲಿಯ ಎಐಜಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶರತ್ ಬಾಬು ಅವರಿಗೆ ಶ್ವಾಸಕೋಶ, ಲಿವರ್, ಕಿಡ್ನಿ ಸೇರಿದಂತೆ ದೇಹದ ಪ್ರಮುಖ ಅಂಗಾಂಗಳಿಗೆ ಹಾನಿಯಾಗಿತ್ತುಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಐಸಿಯು ವಾರ್ಡ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.
.

ಪ್ರಮುಖ ಸುದ್ದಿ :-   ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

ಆರೋಗ್ಯ ಪರಿಸ್ಥಿತಿ ತುಂಬ ಗಂಭೀರವಾಗಿದ್ದರಿಂದ, ಉಸಿರಾಟಕ್ಕೆ ಸಮಸ್ಯೆ ಆಗಬಾರದು ಎಂದು ಅವರನ್ನು ವೆಂಟಿಲೇಟರ್‌ನಲ್ಲಿರಿಸಿಯೇ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು, ಸೋಮವಾರ ಕೊನೆಯುಸಿರು ಎಳೆದಿದ್ದಾರೆ.
1973ರಲ್ಲಿ ಚಿತ್ರರಂಗ ಪ್ರವೇಶಿಸಿದ ಶರತ್ ಬಾಬು ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಜನಪ್ರಿಯ ನಟರಾಗಿದ್ದವರು. ಕನ್ನಡದಲ್ಲಿಯೂ ಅನೇಕ ಜನಪ್ರಿಯ ಸಿನೆಮಾಗಳಲ್ಲಿ ನಟಿಸಿದ್ದರು. ಸಿನಿಮಾ ನಾಯಕನಾಗಿ, ಎರಡನೇ ನಾಯಕನಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮ್ಮ 40 ವರ್ಷದ ಸಿನಿ ಬದುಕಿನಲ್ಲಿ ಸುಮಾರು 200 ಕ್ಕೂ ಹೆಚ್ಚು ಪಾತ್ರಗಳಲ್ಲಿ ಶರತ್ ಬಾಬು ನಟಿಸಿದ್ದಾರೆ.
ಕನ್ನಡದ ಸಿನೆಮಾಗಳಲ್ಲಿ ನಟಿಸಿದ್ದರು. ಜನಪ್ರಿಯ ಸಿನೆಮಾಗಳಾದ ತುಳಸಿದಳ, ಬೆಂಕಿ ಯಲ್ಲಿ ಅರಳಿದ ಹೂವು, ಉಷಾ, ರಣಚಂಡಿ, ಶಕ್ತಿ, ಕಂಪನ, ಗಾಯ, ಹೃದಯ-ಹೃದಯ, ನೀಲ, ನಮ್ಮೆಜಮಾನ್ರು, ಅಮೃತವರ್ಷಿಣಿ ಸಿನಿಮಾದಲ್ಲಿ ಪಾತ್ರವನ್ನು ಕನ್ನಡ ಸಿನಿಮಾ ಪ್ರೇಮಿಗಳು ಮರೆಯುವಂತಿಲ್ಲ. ಕನ್ನಡದ ಪ್ರೀತಿಗಾಗಿ ಧಾರಾವಾಹಿಯಲ್ಲಿಯೂ ಶರತ್ ಬಾಬು ನಟಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement