ಬಿಜೆಪಿ ಸರ್ಕಾರದ ಅವಧಿಯ ಎಲ್ಲ ಕಾಮಗಾರಿಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಹಿಂದಿನ ಬಿಜೆಪಿ ಸರ್ಕಾರ ಕೈಗೊಂಡಿದ್ದ ಎಲ್ಲ ಇಲಾಖೆಗಳ ಕಾಮಗಾರಿಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇಲಾಖೆಗಳ ಅಧೀನಕ್ಕೊಳಪಡುವ ನಿಗಮ ಮಂಡಳಿ/ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲ ಮುಂದಿನ ಹಣ ಬಿಡುಗಡೆ/ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ಆದೇಶದಲ್ಲಿ ತಿಳಿಸಲಾಗಿದೆ.
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಏಕ ರೂಪ್ ಕೌರ್ ಅವರು ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಗಳ ನಿರ್ದೇಶನದಂತೆ, ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ ಮಂಡಳಿ/ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲಾ ಮುಂದಿನ ಹಣ ಬಿಡುಗಡೆ/ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ತಿಳಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement