ಸಾರ್ವಜನಿಕರಿಂದ ಸನ್ಮಾನ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸುವುದಿಲ್ಲ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇನ್ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನ ರೂಪದಲ್ಲಿ ಸಾರ್ವಜನಿಕರಿಂದ ಹಾರ ಶಾಲು ಹೂವಿನ ಗುಚ್ಛಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ಪ್ರೀತಿಯಿಂದ ಕೊಡಬೇಕು ಎಂದಿದ್ದರೆ ಪುಸ್ತಕಗಳನ್ನು ನೀಡಿ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, ” ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯವಾಗುತ್ತದೆ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು ಎಂದು ಅವರು ತಿಳಿಸಿದ್ದಾರೆ.

ಜೀರೋ ಟ್ರಾಫಿಕ್‌ ನಿರಾಕರಿಸಿದ  ಸಿದ್ದರಾಮಯ್ಯ
ತಮಗೆ ಒದಗಿಸಲಾಗಿರುವ ಜೀರೋ ಟ್ರಾಫಿಕ್‌ ಸೌಲಭ್ಯ ವಾಪಸ್‌ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಇರುತ್ತದೆ. ಹೀಗಾಗಿ ವಿಐಪಿಗಳಿಗೆ ಜೀರೋ ಟ್ರಾಫಿಕ್‌ ವ್ಯವಸ್ಥೆ ಮಾಡಿದಾಗ ಜನರು ಬಹಳ ತೊಂದರೆ ಅನುಭವಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

(1) Siddaramaiah on Twitter: “ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ.” / Twitter

ಪ್ರಮುಖ ಸುದ್ದಿ :-   ಏಪ್ರಿಲ್‌ 18, 19ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಇದರ ಬೆನ್ನಲ್ಲೇ ಈಗ ಸನ್ಮಾನ ರೂಪದಲ್ಲಿ ಸಾರ್ವಜನಿಕರಿಂದ ಹಾರ ಶಾಲು ಹೂವಿನ ಗುಚ್ಛಗಳನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಪ್ರೀತಿಯಿಂದ ಕೊಡಲೇಬೇಕೆಂದಿದ್ದರೆ ಪುಸ್ತಕಗಳನ್ನು ನೀಡಿ ಎಂದು ಅವರು ತಿಳಿಸಿದ್ದಾರೆ.
ನಿಕಟಪೂರ್ವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಸ್ಮರಣಿಕೆ, ಹಾರ, ತುರಾಯಿಗಳ ಬದಲು ಪುಸ್ತಕ ಸ್ವೀಕರಿಸುವ ತೀರ್ಮಾನ ತೆಗೆದುಕೊಂಡಿದ್ದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement