ಹಿಂದುತ್ವ-ಗೋಮಾತೆ ಹೆಸರಲ್ಲಿ ಯತ್ನಾಳ, ಡಿಕೆ ಶಿವಕುಮಾರ ಹೆಸರಲ್ಲಿ ಬಸವರಾಜ ಶಿವಗಂಗಾ ಪ್ರಮಾಣವಚನ

ಬೆಂಗಳೂರು : ನೂತನವಾಗಿ ಆಯ್ಕೆಗೊಂಡಿರುವ ಎಲ್ಲ ಶಾಸಕರಿಗೂ ಇಂದು ಸೋಮವಾರದಿಂದ ಆರಂಭವಾಗಿರುವ ವಿಧಾನಸಭೆ ಅಧಿವೇಶನದಲ್ಲಿ ಪ್ರಮಾಣವಚನ ಬೋಧನೆ ಕಾರ್ಯಕ್ರಮ ನಡೆಯುತ್ತಿದೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಹಿಂದುತ್ವ ಹಾಗೂ ಗೋಮಾತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಶಾಸಕ ಬಸವರಾಜ ಶಿವಗಂಗಾ ಅವರು ಡಿ ಕೆ ಶಿವಕುಮಾರ ಅವರ ಹೆಸರಿನಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸದನದ ಹಿರಿಯ ಸದಸ್ಯರಾದ ಆರ್.‌ ವಿ. ದೇಶಪಾಂಡೆ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಿಸಲಾಗಿದ್ದು, ದೇಶಪಾಂಡೆ ಅವರು ಗೆದ್ದ ಅಭ್ಯರ್ಥಿಗಳಿಗೆ ಶಾಸಕರಾಗಿ ಪ್ರಮಾಣವಚನ ಬೋಧಿಸಿದ್ದಾರೆ.
ಚನ್ನಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಶಾಸಕ ಬಸವರಾಜ ಶಿವಗಂಗಾ ಅವರು ಡಿ.ಕೆ. ಶಿವಕುಮಾರ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿದ್ದು, ಸದನದಲ್ಲಿ ಆಕ್ಷೇಪ ಎದುರಾಯಿತು. ಕೂಡಲೇ ಮಧ್ಯ ಪ್ರವೇಶಿಸಿದ ಸ್ಪೀಕರ್ ಆರ್.ವಿ.ದೇಶಪಾಂಡೆ ಅವರು ದೇವರು ಅಥವಾ ಸಂವಿಧಾನದ ಹೆಸರಿನಲ್ಲಿ ಮಾತ್ರ ಪ್ರಮಾಣ ವಚನ ಸ್ವೀಕರಿಸಬೇಕು, ಬೇರೆ ಯಾವುದೇ ಹೆಸರಿನಲ್ಲಿ ಬೇಡ ಎಂದು ಸೂಚನೆ ನೀಡಿದರು.
ಭಗವಂತನ ಹೆಸರಿನಲ್ಲಿ ಸಿದ್ದರಾಮಯ್ಯ ಹಾಗೂ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿ.ಕೆ. ಶಿವಕುಮಾರ್‌ ಪ್ರಮಾಣ ಮಾಡಿದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement