ವಿಧಾನಸಭೆ ಸ್ವೀಕರ್ ಸ್ಥಾನಕ್ಕೆ ಯು.ಟಿ ಖಾದರ್ ನಾಮಪತ್ರ ಸಲ್ಲಿಕೆ

posted in: ರಾಜ್ಯ | 0

ಬೆಂಗಳೂರು: ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಇಂದು ಶಾಸಕ ಯು.ಟಿ ಖಾದರ್ ಅವರು ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ.
ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಮೇ 24 ರಂದು ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮನವೊಲಿಕೆಯ ನಂತರ ಯುಟಿ ಖಾದರ್ ಅವರು ಸ್ಪೀಕರ್ ಸ್ಥಾನಕ್ಕಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಜೊತೆಗೆ ತೆರಳಿದ ಯು.ಟಿ ಖಾದರ್ ಅವರು, ವಿಧಾನಸೌಧದಲ್ಲಿ ವಿಧಾನಸಭೆಯ ಕಾರ್ಯದರ್ಶಿಯವರಿಗೆ ನಾಮಪತ್ರ ಸಲ್ಲಿಸಿದರು.
ದೇಶಪಾಂಡೆ ಅವರನ್ನು ಸ್ಪೀಕರ್ ಹುದ್ದೆಯನ್ನು ನಿಭಾಯಿಸಲು ಕೇಳಲಾಯಿತು. ಆದರೆ, ಅವರು ಹುದ್ದೆಯನ್ನು ನಿರಾಕರಿಸಿದರು ಎನ್ನಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದ್ದು, ಸ್ಪೀಕರ್ ಆಯ್ಕೆಯಲ್ಲಿ ಪಕ್ಷವು ನಿರ್ಧಾರಕ್ಕೆ ಬರಲು ಸಹಾಯ ಮಾಡಿದ್ದಾರೆ ಎನ್ನಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಯು.ಟಿ.ಖಾದರ್ ವ್ಯಕ್ತಿ ಪರಿಚಯ
1969ರ ಅಕ್ಟೋಬರ್‌ 12ರಂದು ಜನಿಸಿದ ಯು ಟಿ ಅಬ್ದುಲ್ ಖಾದರ್ ಫರೀದ್ ಅವರ ತಂದೆ ಹೆಸರು ಯು ಟಿ ಫರೀದ್ ಮತ್ತು ತಾಯಿ ಯು ಟಿ ನಸೀಮಾ ಫರೀದ್. ಇವರು ಬಿ.ಎ ಎಲ್‌ಎಲ್‌ಬಿ ಮಾಡಿದ್ದಾರೆ. ಯು ಟಿ ಖಾದರ್ ಅವರು ಪದವಿ ಪೂರ್ವ ಶಿಕ್ಷಣವನ್ನು ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಕಲಿತು ನಂತರ ಎಸ್‌ಡಿಎಂ ಕಾಲೇಜಿನಲ್ಲಿ ಬಿ.ಎ ಎಲ್ಎಲ್‌ಬಿ ಪದವಿ ಶಿಕ್ಷಣ ಮುಗಿಸಿದ್ದಾರೆ.
2008 ರಲ್ಲಿ ತಮ್ಮ ತಂದೆಯ ನಿಧನದಿಂದ ತೆರವಾದ ಶಾಸಕ ಸ್ಥಾನಕ್ಕೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ನಂತರ 2008, 2013, 2018 ಹಾಗೂ 2023ರಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾದರು. ಅಲ್ಲದೆ ತಾವು ಶಾಸಕರಾಗಿದ್ದ 2008 ರಿಂದ 2013 ರ ಅವಧಿಯ ವಿಧಾನಸಭೆಯ ಅತ್ಯುತ್ತಮ ಕಾರ್ಯ ವೈಖರಿಗಾಗಿ ಸದನ ವೀರ ಹಾಗೂ ಶೈನಿಂಗ್ ಇಂಡಿಯಾ ಅವಾರ್ಡ್ ಪ್ರಶಸ್ತಿ ಪಡೆದಿದ್ದಾರೆ.
2013ರ ಸಿದ್ದರಾಮಯ್ಯ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿ ಹಾಗೂ ಆಹಾರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2018 ರ ಮೈತ್ರಿ ಸರ್ಕಾರದಲ್ಲಿ ನಗರಾಭಿವೃದ್ಧಿ, ವಸತಿ ಸಚಿವರಾಗಿದ್ದರು. 2021 ರಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಆಯ್ಕೆಯಾಗಿ 2023ರ ವರೆಗೆ ಕಾರ್ಯ ನಿರ್ವಹಿಸಿದರು.

ಇಂದಿನ ಪ್ರಮುಖ ಸುದ್ದಿ :-   ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ : 2000 ರೂ. ಪಡೆಯಲು ಯಾವ್ಯಾವ ದಾಖಲೆ ಕೊಡಬೇಕು? ಇಲ್ಲಿದೆ ಮಾಹಿತಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement