ವೀಡಿಯೊ ..: ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದ ರಾಹುಲ್‌ ಗಾಂಧಿ : ಚಾಲಕರೊಡನೆ ಮಾತುಕತೆ | ವೀಕ್ಷಿಸಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ರಾತ್ರಿ ಟ್ರಕ್ ಚಾಲಕರನ್ನು ಭೇಟಿ ಮಾಡಿ “ಅವರ ಸಮಸ್ಯೆಗಳನ್ನು ಆಲಿಸಿದರು. ಪಕ್ಷವು ಟ್ವೀಟ್ ಮಾಡಿದ ದೃಶ್ಯಗಳಲ್ಲಿ, ರಾಹುಲ್‌ ಗಾಂಧಿಯವರು ಟ್ರಕ್‌ನೊಳಗೆ ಕುಳಿತುಕೊಂಡು, ಒಬ್ಬ ಡ್ರೈವರ್‌ನೊಂದಿಗೆ ಪ್ರಯಾಣಿಸುತ್ತಿರುವುದನ್ನು ಮತ್ತು ಟ್ರಕ್ ಚಾಲಕರೊಂದಿಗೆ ಮಾತನಾಡುತ್ತಿರುವುದನ್ನು ಕಾಣಬಹುದು. ರಾಹುಲ್ ಗಾಂಧಿ ಅವರು ಟ್ರಕ್‌ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಚಾಲಕರೊಂದಿಗೆ ದೆಹಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸಿದರು ಎಂದು ಪಕ್ಷ ತಿಳಿಸಿದೆ.
ರಾಹುಲ್ ಗಾಂಧಿ ಅವರು ಟ್ರಕ್ ಡ್ರೈವರ್‌ಗಳ ಸಮಸ್ಯೆಗಳನ್ನು ತಿಳಿದುಕೊಳ್ಳಲು ಅವರೊಂದಿಗೆ ದೆಹಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸಿದರು ಎಂದು ಕಾಂಗ್ರೆಸ್‌ ಹೇಳಿದೆ. ಮಾಧ್ಯಮ ವರದಿಗಳ ಪ್ರಕಾರ, ಭಾರತೀಯ ರಸ್ತೆಗಳಲ್ಲಿ ಸುಮಾರು 90 ಲಕ್ಷ ಟ್ರಕ್ ಚಾಲಕರಿದ್ದಾರೆ. ಅವರಿಗೆ ಅವರದೇ ಆದ ಸಮಸ್ಯೆಗಳಿವೆ. ರಾಹುಲ್ ಅವರ ಮನಸ್ಸಿನ ಮಾತುಗಳನ್ನು ಕೇಳುವ ಕೆಲಸ ಮಾಡಿದ್ದಾರೆ.
ಟ್ರಕ್ ಚಾಲಕರ ನಡುವೆ ರಾಹುಲ್‌ ಗಾಂಧಿ ಕುಳಿತಿರುವ ಚಿತ್ರಗಳನ್ನು ಪೋಸ್ಟ್ ಮಾಡಿದ ಕಾಂಗ್ರೆಸ್, “ನಿಮ್ಮ ಮಧ್ಯೆ ನಿಮ್ಮ ರಾಹುಲ್ ಗಾಂಧಿ” ಎಂದು ಬರೆದಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಈ ತಿಂಗಳ ಆರಂಭದಲ್ಲಿ, ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ, ಗಾಂಧಿಯವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಮಹಿಳೆಯರೊಂದಿಗೆ ಸಂವಾದ ನಡೆಸಿದರು. ಬಿಎಂಟಿಸಿ ಬಸ್‌ ಒಂದರಲ್ಲಿ ಮಹಿಳಾ ಪ್ರಯಾಣಿಕರನ್ನು ಉದ್ದೇಶಿಸಿ ಮಾತನಾಡಿದರು.

ಇಂದಿನ ಪ್ರಮುಖ ಸುದ್ದಿ :-   ವೀಡಿಯೊ...: ಆನೆ-ಘೇಂಡಾಮೃಗದ ನಡುವೆ ನಡೆದ ಭೀಕರ ಕಾಳಗ-ಮುಂದೇನಾಯ್ತು | ವೀಕ್ಷಿಸಿ

ಕರ್ನಾಟಕದಲ್ಲಿದ್ದಾಗ, ಗಾಂಧಿಯವರು ಬೆಂಗಳೂರಿನಲ್ಲಿ ಆಹಾರ ಪೂರೈಸುವ ಕೆಲಸಗಾರರು ಮತ್ತು ವಿತರಣಾ ಪಾಲುದಾರರೊಂದಿಗೆ ಮಾತುಕತೆ ನಡೆಸಿದರು. ಅವರ ಕಷ್ಟವನ್ನು ಕೇಳಿದರು ಮತ್ತು ರೆಸ್ಟೋರೆಂಟ್‌ನಲ್ಲಿ ಅವರೊಂದಿಗೆ ಮಸಾಲೆ ದೋಸೆ ಮತ್ತು ಕಾಫಿ ಸೇವಿಸಿದರು. ಅವರು ಹೋಟೆಲ್‌ಗೆ ತಲುಪಲು ಪಿಲಿಯನ್ ರೈಡರ್‌ನಂತೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಜೂನ್ 23 ರಂದು ನಿತೀಶ್ ಕುಮಾರ್ ಕರೆದ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುವೆ: ಶರದ್ ಪವಾರ್

1 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement