ಸಂಪುಟ ವಿಸ್ತರಣೆ : ಬುಧವಾರ ಸಿದ್ದರಾಮಯ್ಯ-ಶಿವಕುಮಾರ ದೆಹಲಿಗೆ..?

posted in: ರಾಜ್ಯ | 0

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಬುಧವಾರ ಸಂಜೆ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ವರದಿಯಾಗಿದೆ.
ನಾಳೆ ಸಂಜೆ 6 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾತರ ಒಟ್ಟಾಗಿಯೇ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ನಾಯಕರ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಎನ್ನಲಾಗಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜೊತೆಗೆ ಮೊದಲ ಹಂತದಲ್ಲಿ 8 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಮೇ 20ರ ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಿದ ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ. ಶಾಸಕರು ಸಂಪುಟ ವಿಸ್ತರಣೆ ಯಾವಾಗ ಎಂದು ಕಾಯುತ್ತಿದ್ದಾರೆ. ಸಚಿವರಾದವರು ಯಾವ ಖಾತೆ ಸಿಗಲಿದೆ ಎಂದು ಕಾದು ಕುಳಿತಿದ್ದಾರೆ. ಬಾಕಿ ಇರುವ 24 ಸಚಿವ ಸ್ಥಾನಗಳಿಗೆ ಶಾಸಕರನ್ನು ಆಯ್ಕೆ ಮಾಡಿಕೊಳ್ಳಲು ತೀವ್ರ ಪೈಪೋಟಿ ನಡೆದಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೊದಲ ಹಂತದ ಸಂಪುಟ ರಚನೆಯಲ್ಲಿ ಸಿದ್ದರಾಮಯ್ಯ ಅವರ ಕೈ ಮೇಲಾಗಿದೆ. ಹೈಕಮಾಂಡ್ ಹಾಗೂ ಡಿ.ಕೆ.ಶಿವಕುಮಾರ್ ಬಣದಿಂದ ನಾಲ್ಕು ಮಂದಿ ಸಂಪುಟದಲ್ಲಿದ್ದರೆ ಸಿದ್ದರಾಮಯ್ಯ ಅವರ ಆಪ್ತರು ನಾಲ್ಕು ಮಂದಿ ಸೇರ್ಪಡೆಯಾಗಿದ್ದಾರೆ. ಪ್ರಬಲ ವಿರೋಧದ ಬಳಿಕವೂ ಜಮೀರ್ ಅಹಮ್ಮದ್ ಅವರು ಸಂಪುಟದಲ್ಲಿ ಅವಕಾಶ ಪಡೆದಿದ್ದಾರೆ.
ಆದರೆ ಮೂಲಗಳ ಪ್ರಕಾರ ಇಬ್ಬರೂ ನಾಯಕರು ತಮ್ಮವರಿಗೆ ಹೆಚ್ಚಿನ ಅವಕಾಶ ನೀಡಬೇಕೆಂದು ಸಂಭವನೀಯ ಪಟ್ಟಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ತಲುಪಿಸಿದ್ದಾರೆ ಎನ್ನಲಾಗಿದೆ. ಎರಡೂ ಬಣದಿಂದಲೂ ಕನಿಷ್ಠ 20 ಮಂದಿಯ ಹೆಸರುಗಳು ಹೈಕಮಾಂಡ್ ಅಂಗಳಕ್ಕೆ ತಲುಪಿವೆ. ಅದರಲ್ಲಿ ಹಿರಿಯರು, ಕಿರಿಯರು, ಪ್ರಾದೇಶಿಕ ಆದ್ಯತೆಯನ್ನು ಪರಿಗಣಿಸಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಬಾಡಿಗೆದಾರರಿಗೂ ಗೃಹ ಬಳಕೆ ವಿದ್ಯುತ್ ಉಚಿತ, ವಾಣಿಜ್ಯ ಬಳಕೆಗೆ ಇಲ್ಲ : ಸಿಎಂ ಸಿದ್ಧರಾಮಯ್ಯ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement