ಹೊನ್ನಾವರ : ಗ್ಯಾಸ್ ತುಂಬಿದ ಟ್ಯಾಂಕರ್ ಒಂದು ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ಶರಾವತಿ ಸರ್ಕಲ್ ಸಮೀಪ ನಡೆದಿದೆ.
ಮಂಗಳೂರು ಕಡೆಯಿಂದ ಯಲ್ಲಾಪುರದ ಕಡೆ ಬರುತ್ತಿದ್ದ ಟ್ಯಾಂಕರ್, ಪಟ್ಟಣದ ಶರಾವತಿ ಸರ್ಕಲ್ ಬಳಿ ಬರುವಾಗ ಬೈಕ್ ತಪ್ಪಿಸಲು ಹೋಗಿ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆ ಮಧ್ಯಾಹ್ನ 2ರ ಸುಮಾರಿಗೆ ನಡೆದಿದ್ದು, ಟ್ಯಾಂಕರ್ ಚಾಲಕನಿಗೆ ಗಾಯವಾಗಿದೆ. ಆತನಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಟ್ಯಾಂಕರ್ ಪಲ್ಟಿ ಆಗಿರುವುದರಿಂದ ಟ್ಯಾಂಕರ್ ನಲ್ಲಿದ್ದ ಇಂಧನ ಸೋರಿಕೆ ಆಗುತ್ತಿದೆ ಎಂದು ಹೇಳಲಾಗಿದೆ. ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದರಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ವ್ಯತ್ಯವಾಗಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಟ್ಯಾಂಕರ್ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಉರುಳಿವೆ ಎನ್ನಲಾಗಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ