ವೀಡಿಯೊ ..: ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದ ರಾಹುಲ್‌ ಗಾಂಧಿ : ಚಾಲಕರೊಡನೆ ಮಾತುಕತೆ | ವೀಕ್ಷಿಸಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ರಾತ್ರಿ ಟ್ರಕ್ ಚಾಲಕರನ್ನು ಭೇಟಿ ಮಾಡಿ “ಅವರ ಸಮಸ್ಯೆಗಳನ್ನು ಆಲಿಸಿದರು. ಪಕ್ಷವು ಟ್ವೀಟ್ ಮಾಡಿದ ದೃಶ್ಯಗಳಲ್ಲಿ, ರಾಹುಲ್‌ ಗಾಂಧಿಯವರು ಟ್ರಕ್‌ನೊಳಗೆ ಕುಳಿತುಕೊಂಡು, ಒಬ್ಬ ಡ್ರೈವರ್‌ನೊಂದಿಗೆ ಪ್ರಯಾಣಿಸುತ್ತಿರುವುದನ್ನು ಮತ್ತು ಟ್ರಕ್ ಚಾಲಕರೊಂದಿಗೆ ಮಾತನಾಡುತ್ತಿರುವುದನ್ನು ಕಾಣಬಹುದು. ರಾಹುಲ್ ಗಾಂಧಿ ಅವರು ಟ್ರಕ್‌ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಚಾಲಕರೊಂದಿಗೆ ದೆಹಲಿಯಿಂದ … Continued

ಕೆಮ್ಮಿನ ಸಿರಪ್‌ಗಳ ರಫ್ತಿಗೆ ಕೇಂದ್ರ ಸರ್ಕಾರದಿಂದ ಹೊಸ ನಿಯಮ : ಜೂನ್ 1ರಿಂದ ಜಾರಿ

ನವದೆಹಲಿ: ಕೆಮ್ಮಿನ ಸಿರಪ್‌ಗಳ ರಫ್ತಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಕೆಮ್ಮಿನ ಸಿರಪ್ ರಫ್ತುದಾರರು ತಮ್ಮ ಉತ್ಪನ್ನಗಳನ್ನು ವಿದೇಶಗಳಿಗೆ ಕಳುಹಿಸಲು ಶಿಪ್‌ಮೆಂಟ್ ಮಾಡುವುದಕ್ಕೂ ಮುನ್ನ ಅನುಮೋದನೆ ಪಡೆಯಲು ನಿರ್ದಿಷ್ಟ ಸರ್ಕಾರಿ ಲ್ಯಾಬೊರೇಟರಿಗಳಲ್ಲಿ ಅವುಗಳನ್ನು ಪರೀಕ್ಷೆಗೆ ಒಳಪಡಿಸುವುದು ಕಡ್ಡಾಯವಾಗಲಿದೆ. ಜೂನ್ 1ರಿಂದ ಈ ನಿಯಮ ಜಾರಿಯಾಗಲಿದೆ. ಭಾರತೀಯ ಕಂಪನಿಗಳಿಂದ ಪೂರೈಕೆಯಾದ ಕೆಮ್ಮಿನ ಔಷಧಗಳು ವಿವಿಧ ದೇಶಗಳಲ್ಲಿ … Continued

ಸಚಿವ ಸ್ಥಾನಕ್ಕೆ ಮಧು ಬಂಗಾರಪ್ಪ ಪಟ್ಟು : ಶಿವರಾಜಕುಮಾರ ಭೇಟಿಯಾದ ಸುರ್ಜೇವಾಲಾ…!

ಬೆಂಗಳೂರು : ಸಚಿವ ಸ್ಥಾನ ಕ್ಕಾಗಿ ಹಲವರು ಕಸರತ್ತು ನಡೆಸುತ್ತಿದ್ದಾರೆ. ಇದೇ ವೇಳೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಸ್ಯಾಂಡಲ್‌ವುಡ್‌ ನಟ ಶಿವರಾಜಕುಮಾರ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಶಿವರಾಜಕುಮಾರ ಅವರ ಪತ್ನಿಯ ತಮ್ಮನಾಗಿರುವ ಮಧು ಬಂಗಾರಪ್ಪ ಕೂಡ ಒಬ್ಬರಾಗಿದ್ದಾರೆ. ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ … Continued

ವಿಧಾನಸಭೆ ಸ್ವೀಕರ್ ಸ್ಥಾನಕ್ಕೆ ಯು.ಟಿ ಖಾದರ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಇಂದು ಶಾಸಕ ಯು.ಟಿ ಖಾದರ್ ಅವರು ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಮೇ 24 ರಂದು ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮನವೊಲಿಕೆಯ ನಂತರ ಯುಟಿ ಖಾದರ್ ಅವರು ಸ್ಪೀಕರ್ ಸ್ಥಾನಕ್ಕಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ … Continued

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಜೂನ್ 12ರಿಂದ ಪರೀಕ್ಷೆ ಆರಂಭವಾಗಲಿದ್ದು, 19ರವರೆಗೆ ನಡೆಯಲಿದೆ. ಪರೀಕ್ಷೆ ಬೆಳಿಗ್ಗೆ ಬೆಳಗ್ಗೆ 10:0 ರಿಂದ ಮಧ್ಯಾಹ್ನ 1:45 ರವರೆಗೆ ಬಹುತೇಕ ಎಲ್ಲಾ ಪರೀಕ್ಷೆಗಳು ನಡೆಯಲಿವೆ. 2022-23ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯ ಫಲಿತಾಂಶ … Continued

ಐದು ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ : ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ನಡುವೆ ಅಧಿಕಾರ ಹಂಚಿಕೆಯ ಬಗ್ಗೆ ಸೂತ್ರ ಇಲ್ಲ ಎಂದು ಶನಿವಾರ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ ಹೇಳಿದ್ದಾರೆ. ಅಧಿಕಾರ ಹಂಚಿಕೆ ಸೂತ್ರವಿದ್ದರೆ ಹೈಕಮಾಂಡ್ ಘೋಷಣೆ ಮಾಡುತ್ತಿತ್ತು ಎಂದ ಹೇಳಿದ ಅವರು ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿಯೇ ಇರುತ್ತಾರೆ … Continued

ವೀಡಿಯೊ: ‘ಮೇಡಂ ನಿಮಗೆ ನಾನು ಜಗದೀಪ, ಉಪರಾಷ್ಟ್ರಪತಿಯಲ್ಲ’ : ತನಗೆ ಕಲಿಸಿದ್ದ 83 ವರ್ಷದ ಶಾಲಾ ಶಿಕ್ಷಕಿಗೆ ಹೇಳಿದ ಉಪರಾಷ್ಟ್ರಪತಿ …

ನವದೆಹಲಿ: ಭಾರತದಲ್ಲಿ, ಶಿಕ್ಷಕ-ವಿದ್ಯಾರ್ಥಿ ನಡುವಿನ ಸಂಬಂಧವನ್ನು ಸಂಸ್ಕೃತ ಶ್ಲೋಕಗಳು ಮತ್ತು ವೇದ ಶ್ಲೋಕಗಳಲ್ಲಿ ದೈವತ್ವದ ಕಲ್ಪನೆಗಳೊಂದಿಗೆ ವಿವರಿಸಲಾಗಿದೆ. ಭಾರತೀಯ ವಿದ್ಯಾರ್ಥಿಗಳು ತಮ್ಮ ಜೀವನಕ್ಕೆ ತಮ್ಮ ಶಿಕ್ಷಕರ ಕೊಡುಗೆಯನ್ನು ಸ್ಮರಿಸಲು ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತಾರೆ. ಭಾರತದ ಉಪರಾಷ್ಟ್ರಪತಿ 72 ವರ್ಷದ ಜಗದೀಪ ಧನಕರ ಅವರು ಕೇರಳದಲ್ಲಿ ತಮ್ಮ 83 ವರ್ಷದ ಶಾಲಾ ಟೀಚರ್‌ … Continued