ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ : ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ದ ದೂರು ದಾಖಲು

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕೊಲೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐಆರ್‌ ದಾಖಲಾಗಿದೆ. ಕೋಮು ಪ್ರಚೋದಕ ಹಾಗೂ ದ್ವೇಷ ಉಂಟಾಗುವ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ಶಾಸಕ ಹರೀಶ ಪೂಂಜಾ ಮೇ 22 ರಂದು ಬೆಳ್ತಂಗಡಿಯ ಗುಣವತಿ ಅಮ್ಮ … Continued

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್​​ಡಿ ಕುಮಾರಸ್ವಾಮಿ ಅವಿರೋಧ ಆಯ್ಕೆ

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಕಳೆದ ವಿಧಾನಸಭೆ ಅವಧಿಯಲ್ಲೂ ಕುಮಾರಸ್ವಾಮಿ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು. ತಮ್ಮ ಅಧ್ಯಕ್ಷತೆಯಲ್ಲಿ ಈ ಅವಧಿಯ ಮೊದಲ ಶಾಸಕಾಂಗ ಪಕ್ಷದ ಸಭೆ ನಡೆಸಿದರು. ಈ ಸಭೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಪಕ್ಷದ … Continued

ಸೋಲಿನ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಎಂ.ಇಬ್ರಾಹಿಂ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ ಸೋಲಿನ ನೈತಿಕ ಹೊಣೆ ಹೊತ್ತು ಸಿ.ಎಂ. ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇಂದು, ಬುಧವಾರ (ಮೇ 24) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ರಾಜೀನಾಮೆ ಪತ್ರವನ್ನು ದೇವೇಗೌಡರು ಇನ್ನೂ ಅಂಗೀಕರಿಸಿಲ್ಲ … Continued

ನೂತನ ಸಂಸತ್ತು ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಲು 20 ಪಕ್ಷಗಳ ನಿರ್ಧಾರ

ನವದೆಹಲಿ: ಭಾನುವಾರ ನವದೆಹಲಿಯಲ್ಲಿ ಭಾರತದ ಹೊಸ ಸಂಸತ್ತಿನ ಉದ್ಘಾಟನಾ ಸಮಾರಂಭವನ್ನು 20 ಪಕ್ಷಗಳು ಬಹಿಷ್ಕರಿಸುವುದಾಗಿ ಘೋಷಿಸಿವೆ. ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ತೃಣಮೂಲ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಎಡಪಕ್ಷಗಳು, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಜನತಾ ದಳ-ಯುನೈಟೆಡ್ (ಜೆಡಿಯು), ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ … Continued

ಆಸ್ಟ್ರೇಲಿಯಾದಲ್ಲಿ ದೇವಾಲಯ ವಿಧ್ವಂಸಕ ಕೃತ್ಯಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಭಾರತ-ಆಸ್ಟ್ರೇಲಿಯಾ ಪ್ರತಿಜ್ಞೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಅಲ್ಬನೀಸ್ ಸಿಡ್ನಿಯಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆಯ ಸಂದರ್ಭದಲ್ಲಿ ಹಿಂದೂ ದೇವಾಲಯಗಳ ಮೇಲಿನ ಇತ್ತೀಚಿನ ದಾಳಿಗಳು ಮತ್ತು ಆಸ್ಟ್ರೇಲಿಯಾದಲ್ಲಿ ಪ್ರತ್ಯೇಕತಾವಾದಿಗಳ ಚಟುವಟಿಕೆಗಳ ಕುರಿತು ಚರ್ಚಿಸಿದರು. ಪ್ರಧಾನಿ ಮೋದಿ ಮೂರು ದಿನಗಳ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ. ದ್ವಿಪಕ್ಷೀಯ ಸಭೆಯ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಂಬಂಧಕ್ಕೆ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಐದು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದೆ. ರಾಜ್ಯದ ಹಲವೆಡೆ ಮಳೆ ಮಳೆಯಾಗಿದೆ. ಈಗ ಮುಂದಿನ ಐದು ದಿನಗಳ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಎರಡು ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. … Continued

ಸಮಾಜವಾದಿ ಪಕ್ಷದ ಅಜಂ ಖಾನಗೆ ದೊಡ್ಡ ರಿಲೀಫ್‌ : ದ್ವೇಷ ಭಾಷಣದ ಪ್ರಕರಣದಲ್ಲಿ ʼತಪ್ಪಿತಸ್ಥʼ ತೀರ್ಪು ರದ್ದುಪಡಿಸಿದ ಕೋರ್ಟ್‌

ನವದೆಹಲಿ: 2019ರ ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರನ್ನು ಉತ್ತರ ಪ್ರದೇಶದ ನ್ಯಾಯಾಲಯ ಇಂದು, (ಮೇ ೨೪) ದೋಷಮುಕ್ತಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಗುರಿಯಾಗಿಸಿಕೊಂಡು ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಕಳೆದ ವರ್ಷ ಸಮಾಜವಾದಿ ನಾಯಕನನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಕೆಳ … Continued

ವೀಡಿಯೊ..: ಹೆಲ್ಮೆಟ್ ಧರಿಸಿ ಬೈಕ್ ಸವಾರಿ ಮಾಡುತ್ತಿರುವ ನಾಯಿ : “ಇದು ಮನುಷ್ಯರಿಗೆ ಪಾಠ” ಎಂದ ನೆಟ್ಟಿಗರು | ವೀಕ್ಷಿಸಿ

ಬೈಕಿನಲ್ಲಿ ಸವಾರ ಮತ್ತು ಹಿಂಬದಿಯ ಸವಾರ ಹೆಲ್ಮೆಟ್ ಧರಿಸುವುದು ದಿನನಿತ್ಯದ ಟ್ರಾಫಿಕ್‌ನಲ್ಲಿ ಸಾಮಾನ್ಯ ದೃಶ್ಯವಾಗಿದೆ, ಆದರೆ ಒಬ್ಬ ವ್ಯಕ್ತಿಯೊಬ್ಬರು ಹಿಂಬದಿಯ ಸೀಟಿನಲ್ಲಿ ಸವಾರನಂತೆ ಹೆಲ್ಮೆಟ್‌ ಧರಿಸಿ ಕುಳಿತ ನಾಯಿಯ ಜೊತೆ ಬೈಕ್ ಚಲಾಯಿಸುವುದು ಅಸಾಮಾನ್ಯ ಸಂಗತಿಯಾಗಿದೆ. @PMN2463 ಎಂಬ ಟ್ವಿಟ್ಟರ್ ಖಾತೆಯಿಂದ ಮಂಗಳವಾರ ಪೋಸ್ಟ್ ಮಾಡಲಾದ ವೀಡಿಯೊದಲ್ಲಿ ಪ್ರಯಾಣಿಕರಂತೆ ನಾಯಿಯೊಂದು ಬೈಕ್ ಮೇಲೆ ಹೆಲ್ಮೆಟ್‌ ಧರಿಸಿ … Continued

ಕೇರಳ : ದೇವಾಲಯಗಳ ಆವರಣದಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸಿದ ಸುಮಾರು 1200 ದೇವಾಲಯ ನಿರ್ವಹಿಸುವ ತಿರುವಾಂಕೂರು ದೇವಸ್ವಂ ಮಂಡಳಿ

ತಿರುವನಂತಪುರಂ : ದೇವಾಲಯದ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸುವ ಸಾಮೂಹಿಕ ಕಸರತ್ತು ಮತ್ತು ಇತರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ತಿರುವಾಂಕೂರು ದೇವಸ್ವಂ ಮಂಡಳಿ (TDB) ತನ್ನ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಿಗೆ ಹೊಸ ಸುತ್ತೋಲೆ ಹೊರಡಿಸಿದೆ. ತಿರುವಾಂಕೂರು ದೇವಸ್ವಂ ಮಂಡಳಿ ದಕ್ಷಿಣ ಭಾರತದಲ್ಲಿ ಸುಮಾರು 1,200 ದೇವಾಲಯಗಳನ್ನು ನಿರ್ವಹಿಸುವ ಸಂಸ್ಥೆಯಾಗಿದೆ. ದೇವಾಲಯದ ಆವರಣದಲ್ಲಿ ಆರ್‌ಎಸ್‌ಎಸ್ … Continued

ನೂತನ ವಿಧಾನಸಭಾ ಸ್ಪೀಕರ್​ ಆಗಿ ಯು.ಟಿ. ಖಾದರ್ ಅವಿರೋಧ ಆಯ್ಕೆ

ಬೆಂಗಳೂರು: ರಾಜ್ಯ ವಿಧಾನಸಭೆ ನೂತನ ಸ್ಪೀಕರ್‌ ಆಗಿ ಯು.ಟಿ. ಖಾದರ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್‌ ಸ್ಥಾನಕ್ಕೆ ಯು.ಟಿ. ಖಾದರ್‌ ಅವರು ಮಾತ್ರ ನಾಮಪತ್ರವನ್ನು ಸಲ್ಲಿಸಿದ್ದರು. ಇಂದು ಸದನದಲ್ಲಿ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯು.ಟಿ. ಖಾದರ್​ ಅವರ ಹೆಸರನ್ನು ಸೂಚಿಸಿದರು. ಬಳಿಕ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ಅನುಮೋದಿಸಿದರು. ನಂತರ ಬಹುಮತದ … Continued