ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್​​ಡಿ ಕುಮಾರಸ್ವಾಮಿ ಅವಿರೋಧ ಆಯ್ಕೆ

posted in: ರಾಜ್ಯ | 0

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಕಳೆದ ವಿಧಾನಸಭೆ ಅವಧಿಯಲ್ಲೂ ಕುಮಾರಸ್ವಾಮಿ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು.
ತಮ್ಮ ಅಧ್ಯಕ್ಷತೆಯಲ್ಲಿ ಈ ಅವಧಿಯ ಮೊದಲ ಶಾಸಕಾಂಗ ಪಕ್ಷದ ಸಭೆ ನಡೆಸಿದರು. ಈ ಸಭೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಪಕ್ಷದ ಎಲ್ಲ 19 ನೂತನ ಶಾಸಕರು, ವಿಧಾನ ಪರಿಷತ್​​ನ ಎಲ್ಲ ಸದಸ್ಯರು ಹಾಜರಿದ್ದರು.
ವಿಧಾನಮಂಡಲದಲ್ಲಿ ಜನಪರವಾಗಿ, ವಿಷಯಾಧಾರಿತವಾಗಿ ಹೋರಾಟ ಮಾಡುವ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಪಕ್ಷವು ಚುನಾವಣೆಯಲ್ಲಿ ಸೋತಿದೆ. ಸೋತ ತಕ್ಷಣ ಎದೆಗುಂದುವ ಅಗತ್ಯ ಇಲ್ಲ. ತಳಮಟ್ಟದಿಂದ ಸಂಘಟನೆಯನ್ನು ಬಲಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಚುನಾಯಿತ ಶಾಸಕರು, ಸ್ಪರ್ಧೆ ಮಾಡಿದ್ದ ಎಲ್ಲಾ ಅಭ್ಯರ್ಥಿಗಳು ಕೆಲಸ ಮಾಡಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಮಂಡ್ಯ : ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಕಾರು, ನಾಲ್ವರು ಸ್ಥಳದಲ್ಲೇ ಸಾವು

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement