ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ರಾಜ್ಯದ ಈ ಜಿಲ್ಲೆಗಳಲ್ಲಿ ಐದು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದೆ. ರಾಜ್ಯದ ಹಲವೆಡೆ ಮಳೆ ಮಳೆಯಾಗಿದೆ. ಈಗ ಮುಂದಿನ ಐದು ದಿನಗಳ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಎರಡು ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಕೊನೆಯ ಮೂರು ದಿನ ಸಾಧಾರಣ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ರಾಮನಗರ, ಮಂಡ್ಯ, ಮೈಸೂರು, ಬೆಂಗಳೂರು ಜಿಲ್ಲೆಗಳಲ್ಲಿ ಹಾಗೂ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗಾಳಿಯ ವೇಗ ಕೂಡ ಹೆಚ್ಚಿರಲಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದಿದ್ದ ತಾಯಿ ಜೈಲಿನಲ್ಲಿ ಆತ್ಮಹತ್ಯೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement