ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ : ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ದ ದೂರು ದಾಖಲು

posted in: ರಾಜ್ಯ | 0

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕೊಲೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐಆರ್‌ ದಾಖಲಾಗಿದೆ.
ಕೋಮು ಪ್ರಚೋದಕ ಹಾಗೂ ದ್ವೇಷ ಉಂಟಾಗುವ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ಶಾಸಕ ಹರೀಶ ಪೂಂಜಾ ಮೇ 22 ರಂದು ಬೆಳ್ತಂಗಡಿಯ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರ ವಿರುದ್ಧ ಪ್ರಕರಣ ದಾಖಲಾಗಿದೆ. ತುಳುವಿನಲ್ಲಿ‌ ಮಾಡಿದ ಭಾಷಣದ ವೇಳೆ ಪೂಂಜಾ ಯಡವಟ್ಟು ಮಾಡಿದ್ದರು
ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಬುಧವಾರ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ನಮಿತ ಕೆ ಪೂಜಾರಿ ನೀಡಿದ ದೂರಿನ ಮೇರೆಗೆ ಶಾಸಕ ಹರೀಶ ಪೂಂಜಾ ಹಾಗೂ ಬಿಜೆಪಿ ಅಧ್ಯಕ್ಷ ಜಯಂತ ಕೋಟ್ಯಾನ್ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 505 ರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement