ನವದೆಹಲಿ : ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ್ದ ಟೀಂ ಇಂಡಿಯಾದ ಮಾಜಿ ನಾಯಕ, ಇದೀಗ ತನ್ನ ಇನ್‍ಸ್ಟಾಗ್ರಾಮ್ ಫಾಲೋವರ್ಸ್‍ಗಳ ಸಂಖ್ಯೆಯಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ.
ವಿರಾಟ್ ಕೊಹ್ಲಿ ಇನ್‍ಸ್ಟಾಗ್ರಾಮ್ ಖಾತೆಯನ್ನು ಫಾಲೋ ಮಾಡುತ್ತಿರುವವರ ಸಂಖ್ಯೆ ಇದೀಗ 25 ಕೋಟಿ ದಾಟಿದೆ. ಆ ಮೂಲಕ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ನಲ್ಲಿ 25 ಕೋಟಿ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ಮತ್ತು ಜಗತ್ತಿನ ಮೂರನೇ ಕ್ರೀಡಾಪಟು ಎಂಬ ಹೆಗ್ಗಳಿಕೆಯನ್ನು ಕೊಹ್ಲಿ ತನ್ನದಾಗಿಸಿಕೊಂಡಿದ್ದಾರೆ.
ಈ ಹಾದಿಯಲ್ಲಿ ಕೊಹ್ಲಿ, ಟೀಮ್ ಇಂಡಿಯಾದ ದಿಗ್ಗಜರಾದ ಸಚಿನ್ ತೆಂಡೂಲ್ಕರ್ (40.4 ಮಿಲಿಯನ್) ಮತ್ತು ಮಹೇಂದ್ರ ಸಿಂಗ್ ಧೋನಿ (42.4 ಮಿಲಿಯನ್) ಅವರನ್ನು ಬಹಳ ಅಂತರದಿಂದ ಹಿಂದಿಕ್ಕಿದ್ದಾರೆ.
ಅತಿಹೆಚ್ಚು ಇನ್‍ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ಫುಟ್ಬಾಲ್ ದಿಗ್ಗಜರಾದ ಕ್ರಿಸ್ಟಿಯಾನೋ ರೊನಾಲ್ಡೊ ಹಾಗೂ ಲಿಯೋನೆಲ್ ಮೆಸ್ಸಿ ಕ್ರಮವಾಗಿ ಮೊದಲನೇ ಹಾಗೂ ಎರಡನೇ ಸ್ಥಾನದಲ್ಲಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ