ನಿಂತಿದ್ದ ಬಸ್‌ಗೆ ಟೆಂಪೋ ಟ್ರಾವಲ್ಸ್‌ ಡಿಕ್ಕಿ; ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ

ತುಮಕೂರು: ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟೆಪೋ ಟ್ರಾವಲ್ಸ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಡಿ ಹೊಸಹಳ್ಳಿ ಗ್ರಾಮದ ಬಳಿ (ರಾಜ್ಯ ಹೆದ್ದಾರಿ 33) ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿಗಳಾದ ಟಿಟಿ ಚಾಲಕ ವೀರೇಶ (30) ಮತ್ತು ಶಶಿಕಲಾ (69) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದಿಲೀಪಕುಮಾರ, ಆನಂದಕುಮಾರ, ಪ್ರಿಯಾ ಹಾಗೂ ಪ್ರತೀಕ್ಷಾ ಎಂಬವರು ಗಂಭೀರ ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಶಶಿಕಲಾ ಮತ್ತು ಅವರ ಕುಟುಂಬದ 11 ಮಂದಿ ಮೈಸೂರು ಜಿಲ್ಲೆ ಪ್ರವಾಸಕ್ಕೆ ಬುಧವಾರ ರಾತ್ರಿ ಸಿಂಧನೂರಿನಿಂದ ಹೊರಟ್ಟಿದ್ದರು. ಕುಣಿಗಲ್ ಮಾರ್ಗವಾಗಿ ಮೈಸೂರಿಗೆ ಹೊಗಬೇಕಾದರೆ ಗುರುವಾರ ಮುಂಜಾನೆ ಡಿ ಹೊಸಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನ, ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಚಾಲಕ ವೀರೇಶ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಶಶಿಕಲಾ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಹುಲಿಯೂರು ದುರ್ಗ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement