ಬಿಜೆಪಿ ಶಾಸಕ ಡಾ.ಅಶ್ವತ್ಥ ನಾರಾಯಣ ವಿರುದ್ಧ ವಿರುದ್ಧ ಪೊಲೀಸ್ ದೂರು ದಾಖಲು

ಮೈಸೂರು: ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ಫೆ.12ರಂದು ನಡೆದ ಸಾರ್ವಜನಿಕ ಸಭೆಯಲ್ಲಿ ಟಿಪ್ಪು ಸುಲ್ತಾನ್‌ನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮುಗಿಸಬೇಕು ಎಂದು ಹೇಳಿದ್ದ ಬಿಜೆಪಿ ಮುಖಂಡ, ಮಾಜಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. .
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರ ಎಂ.ಲಕ್ಷ್ಮಣ ಅವರು ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ವಿರುದ್ಧ ಬುಧವಾರ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ, ದೇವರಾಜ ಪೊಲೀಸರು ಐಪಿಸಿ ಸೆಕ್ಷನ್ 153 (ಗಲಭೆ ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಶಾಂತಿ ಮತ್ತು ಸೌಹಾರ್ದತೆ ಕದಡುವ ಉದ್ದೇಶದಿಂದ ಡಾ. ಅಶ್ವತ್ಥ ನಾರಾಯಣ ಅವರು ಹೇಳಿಕೆ ನೀಡಿದ್ದಾರೆ ಎಂದು ಲಕ್ಷ್ಮಣ ದೂರಿನಲ್ಲಿ ತಿಳಿಸಿದ್ದಾರೆ.
ಬಿಜೆಪಿ ಮುಖಂಡನ ವಿರುದ್ಧ ಕಾಂಗ್ರೆಸ್ ಮುಖಂಡರು ಫೆ.17ರಂದು ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಇದೀಗ ಹೊಸದಾಗಿ ದೂರು ದಾಖಲಿಸಲಾಗಿದೆ ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement