ಚುನಾವಣೆಯಲ್ಲಿ ಸೋಲು : ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು : ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.
ಈ ಸೋಲು ಕೊನೆಯಲ್ಲ, ಮುಂದೆ ಪಕ್ಷವನ್ನು ಕಟ್ಟೋಣ ಎಂದು ಹೇಳಿ ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದು, ದಯವಿಟ್ಟು ರಾಜೀನಾಮೆ ಅಂಗೀಕಾರ ಮಾಡಿ ಎಂದು ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ.  ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಪಕ್ಷದ ಜತೆ ಸದಾ ನಿಲ್ಲುವೆ, ಸೋಲೇ ಅಂತಿಮವಲ್ಲ ಎಂದು ಹೇಳಿರುವ ಅವರು, ಪಕ್ಷದ ಮರು ನಿರ್ಮಾಣದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದೇನೆ. ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ ಎಂದು ತಿಳಿಸಿದ್ದಾರೆ.
ಇನ್ನು 2019ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಚುನಾವಣ ಕಣಕ್ಕಿಳಿದಿದ್ದ ನಿಖಿಲ್​, ಪಕ್ಷೇತರವಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್​ ವಿರುದ್ಧ ಸೋಲುಂಡಿದ್ದರು. ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ, ಕಾಂಗ್ರೆಸ್​ನ ಇಕ್ಬಾಲ್​ ಹುಸೇನ್​ ವಿರುದ್ಧ ಸೋಲು ಅನುಭವಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement