ಚೀನಾದಲ್ಲಿ ಕೋವಿಡ್ ರೂಪಾಂತರದ ಹೊಸ ಅಲೆ : ಜೂನ್‌ನಲ್ಲಿ 6.5 ಕೋಟಿ ಪ್ರಕರಣ ದಾಖಲಾಗುವ ನಿರೀಕ್ಷೆ

ಚೀನಾದಲ್ಲಿ ಏಪ್ರಿಲ್‌ನಿಂದ ಇಲ್ಲಿ ಕೊರೊನಾ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಈ ತಿಂಗಳ ಅಂತ್ಯದ ವೇಳೆಗೆ ಪ್ರತಿ ವಾರ 4 ಕೋಟಿ ಪ್ರಕರಣಗಳು ಪತ್ತೆಯಾಗಬಹುದು ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲ, ಜೂನ್‌ನಲ್ಲಿ ಈ ಕೊರೊನಾ ಅಲೆ ಉತ್ತುಂಗಕ್ಕೇರಲಿದೆ. ಹಾಗೂ ಪ್ರತಿ ವಾರ 6.5 ಕೋಟಿ ಕೋವಿಡ್ ಸೋಂಕುಗಳು ಕಂಡುಬರಬಹುದು ಎಂದು ನಿರೀಕ್ಷಿಸಲಾಗಿದೆ. ಚೀನಾದ ಅಧಿಕಾರಿಗಳು ಜೂನ್‌ನಲ್ಲಿ ಉತ್ತುಂಗಕ್ಕೇರುವ … Continued

ನೂತನ ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ನಾಣ್ಯ ಬಿಡುಗಡೆ ಮಾಡಲಿರುವ ಕೇಂದ್ರ ಸರ್ಕಾರ: ಇದರ ವಿಶೇಷತೆ ಏನು..?

ನವದೆಹಲಿ : ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಆಚರಿಸುತ್ತಿರುವ ಭಾರತದ ಗೌರವದ ಗುರುತಾಗಿಯೂ ಕಾರ್ಯನಿರ್ವಹಿಸುತ್ತದೆ. ನಾಣ್ಯದ ಒಂದು ಬದಿಯು ಅಶೋಕ ಸ್ತಂಭದ ಸಿಂಹದ ಲಾಂಛನ ಹೊಂದಿರುತ್ತದೆ, ಅದರ ಕೆಳಗೆ “ಸತ್ಯಮೇವ … Continued

ಧಾರವಾಡದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

ಧಾರವಾಡ: ರಿಯಲ್​ ಎಸ್ಟೇಟ್​ ಉದ್ಯಮಿ ಸೇರಿ ಇಬ್ಬರನ್ನು ತಡರಾತ್ರಿ ಬರ್ಬರವಾಗಿ ಹತ್ಯೆಯಾದ ಘಟನೆ ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ನಡೆದ ವರದಿಯಾಗಿದೆ. ಕೊಲೆಯಾದವನನ್ನು ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್​ ಕುಡಚಿ ಎಂದು ಗುರುತಿಸಲಾಗಿದೆ. ಮಹಮ್ಮದ್​ ಕುಡಚಿ ಮನೆಯ ಮುಂದೆ ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ದಾಳಿ ಮಾಡಿ, ಕುಡಚಿಯನ್ನು ಮಚ್ಚಿನಿಂದಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದೆ ಎಂದು … Continued

ನೂತನ ಸಂಸತ್ತಿನ ಉದ್ಘಾಟನೆ: ಮೇ 28ರ ಸಮಾರಂಭದಲ್ಲಿ ಯಾವ ಪಕ್ಷಗಳು ಪಾಲ್ಗೊಳ್ಳುತ್ತಿವೆ..? ಯಾವ್ಯಾವ ಪಕ್ಷಗಳು ಬಹಿಷ್ಕರಿಸುತ್ತಿವೆ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಕಟ್ಟಡವನ್ನು ಉದ್ಘಾಟನೆ ಮಾಡುವುದನ್ನು ಪ್ರತಿಪಕ್ಷಗಳು ವಿರೋಧಿಸುತ್ತಿರುವ ಕಾರಣ ನೂತನ ಸಂಸತ್ ಭವನದ ಉದ್ಘಾಟನೆ ಈಗ ಚರ್ಚೆಗೆ ಗ್ರಾಸವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಕಟ್ಟಡವನ್ನು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ ಎಂಬುದು ವಿರೋಧ ಪಕ್ಷದ ಅಭಿಪ್ರಾಯವಾಗಿದೆ. ಪ್ರತಿಭಟನೆಯ ಸಂಕೇತವಾಗಿ, 21 ವಿರೋಧ ಪಕ್ಷಗಳು ಸಮಾರಂಭವನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ, … Continued

ಶನಿವಾರ 24 ಶಾಸಕರಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ: ಮೂಲಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇನ್ನೂ 24 ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಪಕ್ಷದ ಕೇಂದ್ರ ನಾಯಕರ ನಡುವೆ ನಡೆದ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಗಳು ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ … Continued