ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ತಡರಾತ್ರಿ ಬರ್ಬರವಾಗಿ ಹತ್ಯೆಯಾದ ಘಟನೆ ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ನಡೆದ ವರದಿಯಾಗಿದೆ.
ಕೊಲೆಯಾದವನನ್ನು ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಕುಡಚಿ ಎಂದು ಗುರುತಿಸಲಾಗಿದೆ. ಮಹಮ್ಮದ್ ಕುಡಚಿ ಮನೆಯ ಮುಂದೆ ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ದಾಳಿ ಮಾಡಿ, ಕುಡಚಿಯನ್ನು ಮಚ್ಚಿನಿಂದಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದೆ ಎಂದು ಹೇಳಲಾಗಿದೆ. ಕುಡಚಿ ನಿವಾಸದ ಅನತಿ ದೂರದಲ್ಲೇ ಮತ್ತೊಂದು ಶವ ಪ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತನ ಹೆಸರು ಇನ್ನೂ ತಿಳಿದುಬಂದಿಲ್ಲ. ಆತನೂ ಸಹ ಕುಡಚಿ ಮನೆಯಿಂದಲೇ ಓಡಿ ಹೋಗಿ ಬೇರೆ ಜಾಗದಲ್ಲಿ ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ. ದಾರಿಯುದ್ದಕ್ಕೂ ರಕ್ತ ಚೆಲ್ಲಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರಮಣಗುಪ್ತ ಭೇಟಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡದ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ