ಇಂದಿನಿಂದ ಶಾಲೆಗಳು ಪುನರಾರಂಭ: ಮೇ 31ರಿಂದ ತರಗತಿ ಆರಂಭ

ಬೆಂಗಳೂರು: 22023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ಶಾಲೆಗಳು ತೆರೆಯಲಿದ್ದು, ಮೇ 31ರಿಂದ ರಾಜ್ಯಾದ್ಯಂತ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನಾರಂಭಗೊಳ್ಳಲಿವೆ.
ಶಾಲೆಯ ಮೊದಲ ದಿನ ಪ್ರಾರಂಭಿಸುವ ಮೊದಲು ತರಗತಿಯ ಕೊಠಡಿಗಳು, ಅಡುಗೆ ಪಾತ್ರೆಗಳು, ಆಹಾರ ಧಾನ್ಯಗಳು ಮತ್ತು ನೀರಿನ ಸಂಪ್‌ಗಳು ಸೇರಿದಂತೆ ಆವರಣವನ್ನು ಸ್ವಚ್ಛಗೊಳಿಸಲು ಮತ್ತು ಅನಗತ್ಯ ವಸ್ತುಗಳನ್ನು ವಿಲೇವಾರಿ ಮಾಡಲು ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ.
ಮೇ 29, 30 ರಂದು ಶಾಲೆಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ, ಪ್ರಾರಂಭೋತ್ಸವಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸೂಚಿಸಿದೆ.
ಮೇ 31 ರಂದು ಶಾಲೆ ಆರಂಭದ ದಿನ ಶಾಲೆಯನ್ನು ಸಿಂಗರಿಸಿ ಮಕ್ಕಳಿಗೆ ಗುಲಾಬಿ ಹೂ, ಚಾಕಲೇಟ್ ಅಥವಾ ಇನ್ಯಾವುದೇ ಸಿಹಿ ನೀಡಿ ಬರಮಾಡಿಕೊಳ್ಳಬೇಕು. ಅಂದು ಬಿಸಿಯೂಟದಲ್ಲಿ ಒಂದು ಸಿಹಿ ತಿನಿಸು ತಯಾರಿಸಿ ಮಕ್ಕಳಿಗೆ ನೀಡಬೇಕು ಎಂದು ಸೂಚಿಸಲಾಗಿದೆ.
ಮೊದಲ ದಿನದಿಂದ ಕಳೆದ ಸಾಲಿನಲ್ಲಿ ಅರ್ಧಕ್ಕೆ ಶಾಲೆಯಿಂದ ದೂರ ಉಳಿದ ಮಕ್ಕಳು, ಶಾಲೆಗೆ ಬಾರದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಶಾಲೆಯ ಗ್ರಾಮ ಹಾಗೂ ಸುತ್ತಮತ್ತಲ ಪ್ರದೇಶಗಳಲ್ಲಿ ಜಾಥಾ ನಡೆಸಿ ಜಾಗೃತಿ ಮೂಡಿಸಬೇಕು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ.
ಶಾಲಾ ಆರಂಭದ ಮೊದಲ ದಿನವೇ ಮಕ್ಕಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ಕಡ್ಡಾಯವಾಗಿ ವಿತರಿಸಲು ಸೂಚನೆ ನೀಡಲಾಗಿದೆ. ರಾಜ್ಯಾದ್ಯಂತ ಎಲ್ಲ ಶಾಲೆಗಳಿಗೆ ಶೇಕಡ 95 ರಷ್ಟು ಪಠ್ಯಪುಸ್ತಕ, ಸಮವಸ್ತ್ರ ಪೂರೈಕೆ ಮಾಡಲಾಗಿದೆ. 2023-24ನೇ ಮೊದಲನೇ ಶೈಕ್ಷಣಿಕ ಅಧಿವೇಶನವು ಮೇ 29 ರಿಂದ ಅಕ್ಟೋಬರ್ 7 ರವರಗೆ ನಡೆಯಲಿದೆ. ಎರಡನೇ ಶೈಕ್ಷಣಿಕ ಅಧಿವೇಶನವು ಅಕ್ಟೋಬರ್ 25, 2023 ರಿಂದ ಆರಂಭವಾಗಿ ಏಪ್ರಿಲ್ 10, 2024 ಕ್ಕೆ ಮುಕ್ತಾಯವಾಗಲಿದೆ.
ಮಧ್ಯಂತರ ರಜೆ 2023ರ ಅಕ್ಟೋಬರ್ 8 ರಿಂದ ಅಕ್ಟೋಬರ್ 24 ರವರೆಗೆ ಇರಲಿದೆ. ಬೇಸಿಗೆ ರಜೆ 2024ರ ಏಪ್ರಿಲ್ 11 ರಿಂದ ಮೇ 28 ರ ವರೆಗೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement