ತಿ.ನರಸೀಪುರ ಬಳಿ ಅಪಘಾತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರದ ಮೂಗೂರಿನ ಬಳಿ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಬಳ್ಳಾರಿ ಮೂಲದ 10 ಜನರ ಕುಟುಂಬದವರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, ” ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು‌. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜಿಲ್ಲಾಧಿಕಾರಿಗಳು ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೂರು ಕುಟುಂಬದ 10 ಮಂದಿ ಸಾವು
ಮೃತ ಪಟ್ಟವರು ಬಳ್ಳಾರಿ‌ ತಾಲೂಕಿನ ಸಂಗನಕಲ್ ಗ್ರಾಮದವರಾದ ಸಂದೀಪ (23), ಅವರ ತಂದೆ ಕೊಟ್ರೇಶ್(45), ತಾಯಿ ಸುಜಾತಾ(35), ಮಂಜುನಾಥ (40) ಪತ್ನಿ ಪೂರ್ಣಿಮಾ(30). ಮಕ್ಕಳಾದ ಕಾರ್ತಿಕ್ (11), ಪವನ್ (7) , ಗಾಯತ್ರಿ(30) ಮಗಳು ಶ್ರಾವ್ಯ(3) ಮೃತ ಪಟ್ಟಿದ್ದಾರೆ.
ಇವರು ಬಳ್ಳಾರಿಯಿಂದ ಮೈಸೂರಿಗೆ ರೈಲಿನಲ್ಲಿ ತೆರಳಿ, ಅಲ್ಲಿ ವಾಹನ ಬಾಡಿಗೆ ಪಡೆದಿದ್ದರು. ಮೇ 27ರಂದು ಮೂರು ಕುಟುಂಬದವರು ಪ್ರವಾಸಕ್ಕೆ ತೆರಳಿದ್ದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement